ಮಹಿಳೆ ಕಿಡ್ನಾಪ್ ಕೇಸ್: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಹೈಕೋರ್ಟ್ ಶಾಕ್

ಬೆಂಗಳೂರು,ಫೆಬ್ರವರಿ,5,2026 (www.justkannada.in):  ಕೆ.ಆರ್‌. ನಗರ ಮಹಿಳೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ.ರೇವಣ್ಣಗೆ ಹೈಕೋರ್ಟ್‌ ಶಾಕ್ ನೀಡಿದೆ.

ಪ್ರಕರಣ ರದ್ದು ಕೋರಿ  ಹೆಚ್.ಡಿ.ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸುನಿಲ್‌ ದತ್‌ ಯಾದವ್‌ ಅವರಿದ್ದ ಹೈಕೋರ್ಟ್‌ ಪೀಠವು  ಹೆಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿ ಆದೇಶ ಹೊರಡಿಸಿದೆ.

ಹೈಕೋರ್ಟ್ ನಲ್ಲಿ ಹೆಚ್‌.ಡಿ.ರೇವಣ್ಣ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದ್ದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿದ್ದಾರೆಂಬ ಕಾರಣ ನೀಡಿ ಮನವಿ ಮಾಡಿದ್ದರು. ಆದರೆ ಹೆಚ್.ಡಿ.ರೇವಣ್ಣ ಪರ ವಕೀಲರ‌ ಮನವಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು. ಈ ನಡುವೆ ಹೆಚ್.ಡಿ ರೇವಣ್ಣ ವಿರುದ್ದ  ಚಾರ್ಜ್ ಶೀಟ್ ಸಲ್ಲಿಸದಂತೆ ನೀಡಿದ್ದ ಮಧ್ಯಂತರ ತಡೆ ತೆರವುಗೊಳಿಸಿತು.

Key words: Woman, kidnapping, case, High Court, H.D. Revanna