ಬೆಂಗಳೂರು, ಅಕ್ಟೋಬರ್ 28,2025 (www.justkannada.in): ಆರ್ ಎಸ್ ಎಸ್ ಪಥಸಂಚಲನ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಪಥಸಂಚಲನ ನಿರ್ಬಂಧಿಸುವ ಸಂಬಂಧ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಹೈಕೋರ್ಟ್ನ ನ್ಯಾಯಮೂರ್ತಿ.ಎಂ. ನಾಗಪ್ರಸನ್ನ ಅವರಿದ್ದ ಪೀಠವು ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆರ್ಎಸ್ಎಸ್ ಪಥಸಂಚಲನಕ್ಕೆ ನಿರ್ಬಂಧಿಸುವ ಸರ್ಕಾರದ ಕ್ರಮ ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಪೀಠಕ್ಕೆ ಸಂಸ್ಥೆ ರಿಟ್ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು ರಾಜ್ಯ ಸರ್ಕಾರ, ಗೃಹ ಇಲಾಖೆ, ಹುಬ್ಭಳ್ಳಿ ಕಮಿಷನರ್ ಗೆ ನೋಟಿಸ್ ಜಾರಿ ಮಾಡಿದೆ.
ಸರ್ಕಾರಕ್ಕೆ ನೋಟಿಸ್ ನೀಡಿರುವ ಹೈಕೋರ್ಟ್ ನ್ಯಾಯಪೀಠ, ಅನುಮತಿಯಿಲ್ಲದೇ 10 ಜನ ಜನ ಸೇರಿದರೆ ಅಪರಾಧವೆಂದು ಸರ್ಕಾರದ ಆದೇಶದಲ್ಲಿದೆ. ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಪೊಲೀಸ್ ಕಾಯ್ದೆಯಲ್ಲಿ ಇರುವ ಅಧಿಕಾರವನ್ನು ಸರ್ಕಾರ ಆದೇಶದ ಮೂಲಕ ಚಲಾಯಿಸಿದೆ. ಸಂವಿಧಾನದ ಆರ್ಟಿಕಲ್ 19 (1)A, B, ನೀಡಿರುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ. ಸಂವಿಧಾನ ನೀಡಿರುವ ಹಕ್ಕನ್ನು ಸರ್ಕಾರಿ ಆದೇಶ ಕಿತ್ತುಕೊಳ್ಳಲಾಗದು ಎಂದು ತಿಳಿಸಿದೆ.
Key words: state government, High Court, interim stay , ban , ‘RSS’ procession







