ಬೆಂಗಳೂರು,ಡಿಸೆಂಬರ್,11,2025 (www.justkannada.in): ಸರ್ಕಾರಿ ಆಸ್ಪತ್ರೆಯಲ್ಲಿ ‘ಜನೌಷಧಿ ಕೇಂದ್ರ’ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು ಈ ಮೂಲಕ ರಾಜ್ಯ ಸರ್ಕಾರಕ್ಕೆ ಮುಖಭಂಗವಾದಂತಾಗಿದೆ.
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರಗಳನ್ನ ಬಂದ್ ಮಾಡುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ರಾಕೇಶ್, ಮಹಾಲಿಂಗಪ್ಪ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠವು ರಾಜ್ಯ ಸರ್ಕಾರ ಆದೇಶವನ್ನ ರದ್ದುಗೊಳಿಸಿದೆ.
ವಾದ ಆಲಿಸಿದ ನ್ಯಾಯಪೀಠ 120 ಅಡಿ ಚದರ ಜಾಗದಲ್ಲಿ ಜನೌಷಧಿ ಇಟ್ಟು ಕಡಿಮೆ ದರದಲ್ಲಿ ಔಷಧಿ ನೀಡಿದರೆ ನಿಮಗೆ ಏನು ಸಮಸ್ಯೆ..? ಜನೌಷಧಿ ಬಗ್ಗೆ ಯಾರಾದರೂ ದೂರು ಕೊಟ್ಟಿದ್ದೀರಾ ಎಂದು ಸರ್ಕಾರವನ್ನ ಕೋರ್ಟ್ ತರಾಟೆಗೆ ತೆಗೆದುಕೊಂಡಿತು.
Key words: High Court, stays, government order , close, Janaushadhi Kendra







