ಹೈಕೋರ್ಟ್ ಆದೇಶ ನೀಡಿದ್ರೆ ಪಾದಯಾತ್ರೆ ನಿಲ್ಲಿಸುತ್ತೇವೆ- ಮಾಜಿ ಸಿಎಂ ಸಿದ್ಧರಾಮಯ್ಯ.

ಬೆಂಗಳೂರು,ಜನವರಿ,12,2022(www.justkannada.in):  ಮೇಕೆದಾಟು ಯೋಜನೆ ಜಾರಿಗಾಗಿ ನಡೆಸುತ್ತಿರುವ ಪಾದಯಾತ್ರೆಯನ್ನ ನಿಲ್ಲಿಸುವಂತೆ ಹೈಕೋರ್ಟ್ ಆದೇಶಿಸಿದರೇ ನಿಲ್ಲಿಸುತ್ತೇವೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು.

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಾವು ಹೈಕೋರ್ಟ್ ಆದೇಶದ ವಿರುದ್ಧವಾಗಿ ನಡೆದುಕೊಳ್ಳಲ್ಲ. ನೆಲದ ಕಾನೂನು ಬಗ್ಗೆ ಗೌರವವಿದೆ. ನೆಲದ ಕಾನೂನು ಬಗ್ಗೆ ಬಿಜೆಪಿಗೆ ನಂಬಿಕೆ ಇಲ್ಲ. ಬಿಜೆಪಿ ಶಾಸಕರೇ ನಿಯಮ ಉಲ್ಲಂಘಿಸಿದ್ದಾರೆ. ನಿಯಮ ಪಾಲಿಸುವಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಶಾಸಕ ರೇಣುಕಾಚಾರ್ಯ  ವಿರುದ್ಧ ಯಾಕೆ ಪ್ರಕರಣ ದಾಖಲಿಸಿಲ್ಲ. ಗೃಹ ಸಚಿವರ ಕ್ಷೇತ್ರದಲ್ಲೇ ರ್ಯಾಲಿ ನಡೆದಿದೆ.  ಬಿಜೆಪಿಯವರೇ ನಿಯಮ ಪಾಲಿಸುತ್ತಿಲ್ಲ.  ಕೋವಿಡ್ ಹೆಚ್ಚಾಗಲು ಪ್ರಧಾನಿ, ರಾಜ್ಯ ಸರ್ಕಾರ ಕಾರಣ. ಕೊರೋನಾ ಹೆಚ್ಚಿರುವ ರಾಜ್ಯಗಳಲ್ಲಿ ಮೋದಿ ರ್ಯಾಲಿ ನಡೆಸಿದ್ದಾರೆ ಎಂದು ಕಿಡಿಕಾರಿದರು.

Key words:  High Court-ordered – stop-padayatra-Former CM -Siddaramaiah.