ಸಾರಿಗೆ ನೌಕರರ ಮುಷ್ಕರ ನಾಳೆವರೆಗೆ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ

ಬೆಂಗಳೂರು,ಆಗಸ್ಟ್,4,2025 (www.justkannada.in): ಸಿಎಂ ಸಿದ್ದರಾಮಯ್ಯ ಜೊತೆಗಿನ ಸಭೆ ವಿಫಲವಾದ ಹಿನ್ನೆಲೆಯಲ್ಲಿ  ನಾಳೆಯಿಂದ ರಾಜ್ಯಾದ್ಯಂತ  ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದು ಆದರೆ ಇದಕ್ಕೆ ಒಂದು ದಿನದ ಮಟ್ಟಿಗೆ ಹೈಕೋರ್ಟ್ ಬ್ರೇಕ್ ಹಾಕಿದೆ.

ಸಾರಿಗೆ ನೌಕರರ ಮುಷ್ಕರ ನಾಳೆವರೆಗೆ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಇಂದು ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ ಮಾಡಿದ್ದರು.

ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ ಮುದಗಲ್ ನ್ಯಾ. ಎಂಜಿಎಸ್ ಕಮಲ್ ನೇತೃತ್ವದ ವಿಭಾಗೀಯ ಪೀಠವು  ಸರ್ಕಾರ, ಸಾರಿಗೆ ನಿಗಮಗಳಿಗೆ ನೋಟಿಸ್ ನೀಡಿದೆ. ಅಲ್ಲದೇ ನಾಳೆಯ ಸಾರಿಗೆ ನೌಕರರ ಮುಷ್ಕರವನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸುವಂತೆ ಆದೇಶಿಸಿದೆ.

ನಾಳೆ ಮುಖ್ಯ ನ್ಯಾಯಮೂರ್ತಿ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ ಇಂದು ಮುಖ್ಯನ್ಯಾಯಮೂರ್ತಿಗಳ ಕೋರ್ಟ್ ಕಲಾಪವಿರಲಿಲ್ಲ ಹೀಗಾಗಿ ಬೇರೊಂದು ಪೀಠದಲ್ಲಿ ವಿಚಾರಣೆ ನಡೆದಿತ್ತು.

Key words: High Court, orders, transport workers, strike