ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಹೈಕೋರ್ಟ್ ತೀವ್ರ ತರಾಟೆ

ಬೆಂಗಳೂರು,ಜನವರಿ,28,2026 (www.justkannada.in): ಶಿಡ್ಲಘಟ್ಟ ಪಾರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಹೈಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ.

ತನ್ನ  ವಿರುದ್ದದ ಎಫ್ ಐಆರ್ ರದ್ದು ಕೋರಿ ರಾಜೀವ್ ಗೌಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ವೇಳೆ ರಾಜೀವ್ ಗೌಡ ಪರ ವಾದ ಮಂಡಿಸಿದ ಹಿರಿಯ ವಕೀಲ ವಿವೇಕ್ ರೆಡ್ಡಿ,  ಫೋನ್ ಮೂಲಕ ಾಡಿದ ಮಾತಿಗೆ ಮಾಧ್ಯಮದಲ್ಲೇ ಕ್ಷಮೆ ಕೇಳಿದ್ದಾರೆ. ಬಿಎಸ್ ಎನ್ ಸೆಕ್ಷನ್ 132 ಈ ಕೇಸ್ ನಲ್ಲಿ ಅನ್ವಯವಾಗಲ್ಲ ತನಿಖೆಗೆ ಸಹಕರಿಸಲು ಸಿದ್ದರಿರುವುರಿಂದ ರಕ್ಷಣೆಗೆ ಮನವಿ ಮಾಡಿದರು.  ಸಾರ್ವಜನಿಕವಾಗಿ ಕ್ಷಮೆ ಕೇಳಲು ರಾಜೀವ್ ಗೌಡ ಸಿದ್ದರಿದ್ದಾರೆ ಎಂದು ಕೋರ್ಟ್ ಗೆ ಮನವಿ ಸಲ್ಲಿಸಿದರು.

ಈ ವೇಳೆ ರಾಜೀವ್ ಗೌಡಗೆ ತರಾಟೆ ತೆಗೆದುಕೊಂಡ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ಅರ್ಜಿದಾರರ ವಿರುದ್ದ ಬಿಎನ್ ಎಸ್ ಸೆಕ್ಷನ್ 74 ಮತ್ತು 79 ಏಕೆ ಹಾಕಿಲ್ಲ   ಅರ್ಜಿದಾರ ಇಂತಹ ಮಾತನ್ನೆಲ್ಲಾ ಹೇಗೆ ಆಡಲು ಸಾಧ್ಯ ? ಒಮ್ಮೆ ಮಾತನಾಡಿದರೆ ವಾಪಸ್ ಪಡೆಯಲು ಆಗುವುದಿಲ್ಲ ನಿಯಂತ್ರಣವಿಲ್ಲದ ನಾಲಿಗೆಯೇ ಎಲ್ಲವನ್ನೂ ಹಾಳು ಮಾಡಬಲ್ಲದು. ನೀವು ಕ್ಷಮೆ ಕೇಳಿದರೂ ಒಡೆದಿರುವುದು ಒಂದಾಗುವುದಿಲ್ಲ ಎಂದು ಕ್ಲಾಸ್ ತೆಗೆದುಕೊಂಡಿತು.  ರಾಜೀವ್ ಗೌಡ ಅರ್ಜಿ ಸಂಬಂಧ ಆದೇಶ ಕಾಯ್ದಿರಿಸಿತು.

Key words: High Court, Congress leader, Rajiv Gowda , threatening, officer