5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ವಿಚಾರಣೆ ಮುಂದೂಡಿಕೆ.

ಬೆಂಗಳೂರು,ಮಾರ್ಚ್,11, 2023(www.justkannada.in):  5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ವಿಭಾಗೀಯ ಪೀಠ ನಿರಾಕರಿಸಿದ್ದು ವಿಚಾರಣೆಯನ್ನ ಮುಂದೂಡಿದೆ.

  5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ  ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ ನರೇಂದರ್ ನೇತೃತ್ವದ ವಿಭಾಗೀಯ ಪೀಠವು ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿ  ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿದೆ.

ಮಾರ್ಚ್ 13ರಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡುವುದಾಗಿ ಸರ್ಕಾರ ತಿಳಿಸಿದೆ. ಈ ಶೈಕ್ಷಣಿಕ ವರ್ಷದಿಂದ 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿದ್ದು, ಬೋರ್ಡ್ ಎಕ್ಸಂಗೆ ತಡೆ ನೀಡುವ ಮೂಲಕ ಹೈಕೋರ್ಟ್‌ ಶಿಕ್ಷಣ ಇಲಾಖೆಗೆ ಬಿಗ್ ಶಾಕ್ ನೀಡಿತ್ತು.

Key words: High Court-refused-stay – order -canceling – 5th and 8th class -board exams.