ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹಗೊಳಿಸಿದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ.

ಬೆಂಗಳೂರು,ಸೆಪ್ಟಂಬರ್,11,2023(www.justkannada.in): ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣಅವರನ್ನ ಅನರ್ಹಗೊಳಿಸಿದ  ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಆರೋಪ ಸಾಬೀತಾದ ಹಿನ್ನೆಲೆ ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಸಂಸದ ಸ್ಥಾನವನ್ನ ಅಸಿಂಧುಗೊಳಿಸಿ ಹೈಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವವರೆಗೆ ಸಂಸದ ಸ್ಥಾನದಿಂದ ಅನರ್ಹ ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು.

ಆದರೆ ಅರ್ಜಿಯನ್ನ ವಜಾಗೊಳಿಸಿರುವ ನ್ಯಾ.ಕೆ. ನಟರಾಜನ್ ಪೀಠ, ಸಂಸದರಾಗಿ ಪ್ರಜ್ವಲ್  ರೇವಣ್ಣ ಆಯ್ಕೆ ಅಸಿಂಧು ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.  ಈ ಮೂಲಕ ಪ್ರಜ್ವಲ್ ರೇವಣ್ಣರಿಗೆ ಹಿನ್ನಡೆಯಾಗಿದೆ.

Key words: High Court- refused – stay – order- disqualifying -Prajwal Revanna – MP-position