Saturday, August 1, 2026

BDA Apartments

Home Front Page ಮುರುಘಾ ಶ್ರೀ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ತಡೆ

ಮುರುಘಾ ಶ್ರೀ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು, ನವೆಂಬರ್ 21, 2023 (www.justkannada.in): ಮುರುಘಾ ಶ್ರೀ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ  ಶ್ರೀಗಳ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಚಿತ್ರದುರ್ಗ 2ನೇ ಜಿಲ್ಲಾ ನ್ಯಾಯಾಧೀಶರ ಮುಂದಿರುವ ಕೇಸ್​​​ಗಳಿಗೆ ತಡೆ ನೀಡಿ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಈಗಾಗಲೇ ಮುರುಘಾ ಶರಣರು ಮೊದಲ ಪೋಕ್ಸೋ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡು ಒಂದು ವರ್ಷದ ನಂತರ ಜೈಲಿನಿಂದ ಬಿಡುಗಡೆಗೊಂಡಿದ್ದರು.

ಆದರೆ, 2ನೇ ಪೋಕ್ಸೋ ಪ್ರಕರಣದಲ್ಲಿ ನಿನ್ನೆ (ನವೆಂಬರ್ 21) ಚಿತ್ರದುರ್ಗ ನ್ಯಾಯಾಲಯ ಮುರುಘಾ ಶ್ರೀ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು. ಈ ಬೆಳವಣಿಗೆಯಿಂದ ಶ್ರೀಗಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.