Friday, October 2, 2026

BDA Apartments

Home Front Page ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

ಬೆಂಗಳೂರು,ಮೇ,19,2026 (www.justkannada.in): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಂಟಿ ಕ್ರಿಯಾಸಮಿತಿ ವತಿಯಿಂದ ನಾಳೆ ಕರೆ ನೀಡಲಾಗಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ.

ಶೇ.25ರಷ್ಟು ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಈ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ನಿನ್ನೆ ಪಿಐಎಲ್ ಸಲ್ಲಿಕೆಯಾಗಿತ್ತು.

ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳಾದ ಸೂರಜ್ ಗೋವಿಂ‍ದ ರಾಜ್, ಕೆ.ಮನ್ಮಥರಾವ್  ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ನಿರ್ಬಂಧ ವಿಧಿಸಿದೆ. ರಾಜ್ಯ ಸರ್ಕಾರ ಮತ್ತು ಸಾರಿಗೆ ಸಂಘಟನೆಗಳಿಗೆ ನೋಟಿಸ್  ನೀಡಿರುವ ನ್ಯಾಯಪೀಠವು, ನಾಳೆ ಮುಷ್ಕರ ನಡೆಸಬೇಡಿ. ಸಾರಿಗೆ ಸಂಘಟನಗಳೊಂದಿಗೆ ಸರ್ಕಾರ ಚರ್ಚೆ ನಡೆಸಲಿ. ಸಾರಿಗೆ ಸಚಿವರೊಂದಿಗೆ ಸಭೆ ನಡೆಸುವಂತೆ ಸೂಚನೆ ನೀಡಿದೆ. ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ jk02_new jk02 new

ಈ ಮೂಲಕ ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ ಬಿದ್ದಿದ್ದು,  ನಾಳೆ ಎಂದಿನಂತೆ ಕೆಎಸ್ ಆರ್ ಟಿಸಿ ಬಿಎಂಟಿಸಿ ಬಸ್ ಗಳು ಸಂಚಾರ ನಡೆಸಲಿದೆ.

Key words: High Court, break, transport workers, strike