ಹೈಕೋರ್ಟ್ ತೀರ್ಪಿನಿಂದ ಕಾಂಗ್ರೆಸ್ ನಾಯಕರಿಗೆ ಕಪಾಳ ಮೋಕ್ಷ – ಶಾಸಕ ಎಂ.ಪಿ ರೇಣುಕಾಚಾರ್ಯ.

0
1

ಬೆಂಗಳೂರು,ಮಾರ್ಚ್,15,2022(www.justkannada.in):  ಸರ್ಕಾರದ ಸಮವಸ್ತ್ರ ನೀತಿ ಸಂಹಿತೆಯನ್ನ ಹೈಕೋರ್ಟ್ ಎತ್ತಿ ಹಿಡಿದು ತೀರ್ಪು ಪ್ರಕಟಿಸಿದ್ದು ಇದು, ಕಾಂಗ್ರೆಸ್ ನಾಯಕರಿಗೆ ಕಪಾಳ ಮೋಕ್ಷವಾದಂತಾಗಿದೆ ಎಂದ ಬಿಜೆಪಿ  ಶಾಸಕ ಎಂ.ಪಿ ರೇಣುಕಾಚಾರ್ಯ ತಿಳಿಸಿದರು.

ಹಿಜಾಬ್ ಕುರಿತು ಹೈಕೋರ್ಟ್ ತೀರ್ಪಿನ ಬಗ್ಗೆ ಮಾತನಾಡಿದ ಶಾಸಕ ಎಂ.ಪಿ ರೇಣುಕಾಚಾರ್ಯ, ಹಿಜಾಬ್ ವಿವಾದದಿಂದ ಹಲವು ಸಂಘಟನೆಗಳು ಶಾಂತಿ ಕದಡುವ ಕೆಲಸ ಮಾಡಿದ್ದವು. ವಿನಾಕಾರಣ ಶಾಂತಿ ಕದಡುವ ಪ್ರಯತ್ನ ನಡೆಸಿದ್ದಾರೆ. ಮಕ್ಕಳಿಗೆ ಶಿಕ್ಷಣ ಸಿಗದಂತೆ ಮಾಡಲು ಹೊರಟಿದ್ರು . ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿದರೆ ಭಯೋತ್ಪಾದನೆಗೆ ಬಳಸಿಕೊಳ್ಳಬಹುದು ಎಂದು ಚಿಂತನೆ ನಡೆಸಿದ್ದರು ಎಂದು ಆರೋಪಿಸಿದರು.

ಹೈಕೋರ್ಟ್ ರಾಜ್ಯ ಸರ್ಕಾರದ ನಿಲುವನ್ನು ಎತ್ತಿ ಹಿಡಿದಿದೆ. ಸಮವಸ್ತ್ರ ಕಡ್ಡಾಯ ಎಂದು ಸರ್ಕಾರ ಆದೇಶ ಹೊರಡಿಸಿತ್ತು. ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಇದರಿಂದ ಕಾಂಗ್ರೆಸ್ ಮುಖಂಡರಿಗೆ ಕಪಾಳಮೋಕ್ಷವಾಗಿದೆ. ಕಾಂಗ್ರೆಸ್ ನಿಂದ ಈಗಾಗಲೇ ಎಸ್ ಸಿ.ಎಸ್ ಟಿ ದೂರವಾಗಿದ್ದಾರೆ. ಇನ್ಮುಂದೆ ಮುಸ್ಲಿಮರೂ ದೂರವಾಗುತ್ತಾರೆ ಎಂದು ಎಂ.ಪಿ ರೇಣುಕಾಚಾರ್ಯ ವ್ಯಂಗ್ಯವಾಡಿದರು.

Key words: High Court-verdict- MLA -MP Renukacharya.