Friday, October 9, 2026

BDA Apartments

Just Kannada BDA JK_Adv BDA Adv
Home DASARA-2026 ಉನ್ನತ ಮಟ್ಟದ ಸಭೆ: ಅ.11ಕ್ಕೆ ಮೈಸೂರು ದಸರಾ ಉದ್ಘಾಟನೆ, ಅ.21ಕ್ಕೆ ಜಂಬೂಸವಾರಿ

ಉನ್ನತ ಮಟ್ಟದ ಸಭೆ: ಅ.11ಕ್ಕೆ ಮೈಸೂರು ದಸರಾ ಉದ್ಘಾಟನೆ, ಅ.21ಕ್ಕೆ ಜಂಬೂಸವಾರಿ

ಬೆಂಗಳೂರು,ಜುಲೈ,10,2026 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಣೆಗೆ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಸಿದ್ದತೆ ಆರಂಭಿಸಿದ್ದು ಈ ನಡುವೆ ಅಕ್ಟೋಬರ್ 11 ರಂದು ಮೈಸೂರು ದಸರಾ ಉದ್ಘಾಟನೆಯಾಗಲಿದೆ.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ  ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ದಸರಾ ಉದ್ಘಾಟನೆ, ಜಂಬೂಸವಾರಿ ಮೆರವಣಿಗೆ ದಿನಾಂಕ ಸಮಯ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಿದೆ.

ಅದರಂತೆ  ಅಕ್ಟೋಬರ್ 11ರಂದು ಚಾಮುಂಡಿಬೆಟ್ಟದಲ್ಲಿ ಮೈಸೂರು ದಸರಾ ಉದ್ಘಾಟನೆಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂದು  ಬೆಳಿಗ್ಗೆ 11.50ಕ್ಕೆ ಶುಭ ಧನುರ್ ಲಗ್ನದಲ್ಲಿ ದಸರಾಗೆ ಚಾಲನೆ ದೊರೆಯಲಿದೆ.ಉನ್ನತ ಮಟ್ಟದ ಸಭೆ: ಅ.11ಕ್ಕೆ ಮೈಸೂರು ದಸರಾ ಉದ್ಘಾಟನೆ, ಅ.21ಕ್ಕೆ ಜಂಬೂಸವಾರಿ jambusavar...

ಇನ್ನು ಅಕ್ಟೋಬರ್ 21 ರಂದು ಮೈಸೂರು ದಸರಾ ಪ್ರಮುಖ ಆಕರ್ಷಣೆ ಐತಿಹಾಸಿಕ ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು ಅಂದು ಸಂಜೆ 4.10ರಿಂದ 4.35ರ ನಡುವೆ ತಾಯಿ ಚಾಮುಂಡೇಶ್ವರಿಗೆ ಸಿಎಂ  ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ಸಿಗಲಿದೆ.ಉನ್ನತ ಮಟ್ಟದ ಸಭೆ jk02_new jk02 new

Key words: High-level, meeting, Mysore Dasara, inauguration, Jambu Savari