ಮೈಸೂರು ದಸರಾ ಆಚರಣೆ ಸಂಬಂಧ ಸೆ.8ಕ್ಕೆ ಹೈಪವರ್ ಕಮಿಟಿ ಮೀಟಿಂಗ್ – ಸಚಿವ ಎಸ್.ಟಿ ಸೋಮಶೇಖರ್

ಮೈಸೂರು,ಸೆಪ್ಟಂಬರ್,5,2020(www.justkannada.in): ನಾಡ ಹಬ್ಬ  ಮೈಸೂರು  ದಸರಾ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟಂಬರ್ 8 ರಂದು ಹೈಪವರ್ ಕಮಿಟಿ ಸಭೆ ನಡೆಯಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.jk-logo-justkannada-logo

ಮೈಸೂರು ದಸರಾ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಸೆಪ್ಟಂಬರ್ 8 ರಂದು ನಡೆಯುವ ಹೈಪವರ್ ಕಮಿಟಿ ಸಭೆಯಲ್ಲಿ ದಸರಾ ಆಚರಣೆ ರೂಪುರೇಷೆಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಬಳಿಕ ಮೈಸೂರಿನಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆಸಿ ಚರ್ಚಿಸುತ್ತೇವೆ ಎಂದು ತಿಳಿಸಿದರು.high-power-committee-meeting-mysore-dasara-celebration-minister-st-somashekhar

ಸ್ಯಾಂಡಲ್‌ ವುಡ್ ಡ್ರಗ್ ಮಾಫಿಯಾ ಬೆಳಕಿಗೆ ಬಂದ ಬೆನ್ನಲ್ಲೇ ಮೈಸೂರಿನಲ್ಲೂ ಹೈ ಅಲರ್ಟ್ ಆಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಎಸ್.ಟಿ ಸೋಮಶೇಖರ್, ಈ ರೀತಿ ಪ್ರಕರಣ ಕಂಡು ಬಂದಲ್ಲಿ ಪೊಲೀಸರೇ ಜವಾಬ್ದಾರರು. ಆ ವ್ಯಾಪ್ತಿಯ ಎಸಿಪಿ ಇನ್ಸಪೆಕ್ಟರ್ ಅವರೇ ನೇರ ಹೊಣೆ. ಅವರ ವಿರುದ್ಧ ಕ್ರಮ‌ ಕೈಗೊಳ್ಳಲಾಗುವುದು. ಈ ಎಲ್ಲಾ ವಿಚಾರಗಳ ಚರ್ಚೆಗೆ ಸಭೆ ನಿಗದಿ ಮಾಡಲಾಗುತ್ತದೆ ಎಂದು ತಿಳಿಸಿದರು.

Key words: High Power Committee -Meeting – Mysore Dasara- Celebration-Minister- ST Somashekhar