ಹಿಜಾಬ್ ನಿಷೇಧ ಆದೇಶ ವಾಪಸ್: ನಾವಿನ್ನೂ ಯೋಚನೆ ಮಾಡಿಲ್ಲ ಎಂದ ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು, ಡಿಸೆಂಬರ್,25,2023(www.justkannada.in):  ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ನೀಡಿದ  ಹೇಳಿಕೆಗೆ ಬಿಜೆಪಿ ವ್ಯಾಪಕ ವಿರೋಧ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಹಿಜಾಬ್ ವಿಷಯವನ್ನು ಅನಗತ್ಯವಾಗಿ ದೊಡ್ಡದು ಮಾಡಲಾಗಿದೆ, ಈ ವಿಚಾರದ ಬಗ್ಗೆ ನಾವಿನ್ನೂ ಯೋಚನೆ ಮಾಡಿಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್,   ಹಿಜಾಬ್ ವಿಚಾರ ಚರ್ಚೆಗೆ ಬರುತ್ತಿದೆ, ಚರ್ಚೆ ಮಾಡಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ. ಆದರೆ ಅದೇ ವಿಚಾರವನ್ನ ದೊಡ್ಡದು ಮಾಡಲಾಗಿದೆ ಎಂದರು.

ರೈತರ ಬಗ್ಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರ ಹೇಳಿಕೆ ಕುರಿತು  ನಾನು ಪ್ರತಿಕ್ರಿಯಿಸುವುದಿಲ್ಲ,  ಆ ಬಗ್ಗೆ ಅವರನ್ನೇ ಕೇಳಿ ಎಂದರು.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಚಿವರನ್ನು,ವೀಕ್ಷಕರನ್ನಾಗಿ ನೇಮಿಸಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಈ ಬಗ್ಗೆ ನಾನು ಮತ್ತು ಸಿಎಂ ಸಚಿವರ ಜೊತೆ ಚರ್ಚೆ ಮಾಡಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: Hijab -ban- order- withdrawn- DCM -DK Shivakumar –not- thought