ಹಿಜಾಬ್ ನಿಷೇಧ  ವಾಪಸ್: ಸಿಎಂ ಸಿದ್ದರಾಮಯ್ಯ  ಹೇಳಿಕೆಗೆ ಅಸಮಾಧಾನ  ವ್ಯಕ್ತಪಡಿಸಿದ ಪೇಜಾವರ ಶ್ರೀಗಳು.

ಬೆಳಗಾವಿ, ಡಿಸೆಂಬರ್,23 ,2023(www.justkannada.in):  ಹಿಜಾಬ್  ನಿಷೇಧ ವಾಪಾಸ್ ಪಡೆಯುತ್ತೇವೆ ಎಂದು ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ಮಾತನಾಡಿದ ವಿಶ್ವ ಪ್ರಸನ್ನ ತೀರ್ಥ ಪೇಜಾವರ ಶ್ರೀಗಳು, ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಒಂದು ಕಾನೂನು ಮಾಡುವುದರಿಂದ ಸಮಾಜದಲ್ಲಿ ದೊಡ್ಡ ಕ್ಷೋಭೆ ಉಂಟಾಗುತ್ತದೆ. ಕಾನೂನು ಮಾಡಲಿ ಅದು ಸಮಾಜದಲ್ಲಿ ಒಂದು ಪಂಗಡವನ್ನ ಗುರಿಯಾಗಿರಿಸಿಕೊಂಡು ಮಾಡುವುದು ಸರಿಯಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಯಾವುದೇ ಒಂದು ಪಂಗಡದ ಸಿಎಂ ಅಲ್ಲ. ಅವರು ಕರ್ನಾಟಕದ ಎಲ್ಲ ಸಮುದಾಯದ ಮುಖ್ಯಮಂತ್ರಿ. ಸರ್ಕಾರ, ಸಿಎಂ ವರ್ತನೆ ಸಮಾಜದಲ್ಲಿ ಶೋಭೆ ತರುವಂತಹದ್ದು ಅಲ್ಲ. ಇಂತಹ ನಡವಳಿಕೆ ಸಮಾಜದಲ್ಲಿ ಗೊಂದಲಕ್ಕೆ ಕಾರಣವಾಗುತ್ತದೆ. ಸಿದ್ದರಾಮಯ್ಯ ಹೀಗೆ ಆಡಳಿತ ಮಾಡಬಾರದು ಎಂದು ಪೇಜಾವರ ಶ್ರೀಗಳು ಬೇಸರ ವ್ಯಕ್ತಪಡಿಸಿದರು.

Key words: Hijab ban –withdraw- Pejavara shri- displeasure- CM Siddaramaiah