ನಾಳೆಯಿಂದ 3 ದಿನಗಳ ಕಾಲ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ.

ಬೆಂಗಳೂರು,ಫೆಬ್ರವರಿ,8,2022(www.justkannada.in):  ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ವಿವಾದ ತಾರಕಕ್ಕೇರಿದ್ದು, ಇತರೇ ಶಾಲಾ ಕಾಲೇಜುಗಳಲ್ಲಿ ಗಲಾಟೆ ಹಬ್ಬುವ ಆತಂಕ ಎದುರಾದ  ಹಿನ್ನೆಲೆ  ನಾಳೆಯಿಂದ ಮೂರು ದಿನಗಳ ಕಾಲ ಪ್ರೌಢ  ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಟ್ವಿಟ್ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ. ಶಾಂತಿ ಸಹಭಾಳ್ವೆ ಕಾಯ್ದುಕೊಳ್ಳುವಂತೆ  ಕೋರಿರುವ ಸಿಎಂ ಬೊಮ್ಮಾಯಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಎಲ್ಲಾ ಪ್ರೌಢ ಶಾಲೆ ಹಾಗೂ ಕಾಲೇಜುಗಳನ್ನ ಮುಂದಿನ 3 ದಿನಗಳವರೆಗೆ ಮುಚ್ಚುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಗೋವಾದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ ರಾಜ್ಯದ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಉದ್ಭವಿಸಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ತಕ್ಷಣ ರಜೆ ಘೋಷಿಸುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದರು.

Key words: hijab-CM basavaraj bommai-school-colleges