ಹಿಜಾಬ್ ತಂಟೆಗೆ ಬಂದ್ರೆ ತುಂಡು ತುಂಡು ಮಾಡುವುದಾಗಿ ಹೇಳಿದ್ಧ ‘ಕೈ’ ಮುಖಂಡ ಅರೆಸ್ಟ್.

ಕಲಬುರಗಿ,ಮಾರ್ಚ್,8,2022(www.justkannada.in):  ಹಿಜಾಬ್ ತಂಟೆಗೆ ಬಂದರೆ ತುಂಡು ತುಂಡು ಮಾಡುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡನನ್ನು ಪೊಲೀಸರು  ಬಂಧಿಸಿದ್ದಾರೆ.

ಕಾಂಗ್ರೆಸ್​ ಮುಖಂಡ ಮುಕ್ರಂ ಖಾನ್ ಎಂಬವರನ್ನು ಪೊಲೀಸರು  ವಶಕ್ಕೆ ಪಡೆದಿದ್ದಾರೆ. ಮುಕ್ರಂಖಾನ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್​ ಮುಖಂಡ ಆಗಿದ್ದು, ಹಿಜಾಬ್ ವಿವಾರದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದ್ದ ವೇಳೆ  ಮುಕ್ರಂ ಖಾನ್ ವಿವಾದಾತ್ಮಕ ಮತ್ತು ಬೆದರಿಕೆಯ ಹೇಳಿಕೆ ನೀಡಿದ್ದರು.

ಈ ಕುರಿತು ಸೇಡಂ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ಮುಕ್ರಂ ಖಾನ್​ರನ್ನು ಪೊಲೀಸರು ಹೈದರಾಬಾದ್​ನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: hijab-congress-leader-arrest