ಶೈಕ್ಷಣಿಕ ಕೇಂದ್ರಗಳಲ್ಲಿ ಅಶಾಂತಿಗೆ ಕಾರಣವಾಗುವವರ ವಿರುದ್ಧ ಕಠಿಣ ಕ್ರಮ- ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ.

ಬೆಂಗಳೂರು,ಫೆಬ್ರವರಿ,8,2022(www.justkannada.in):  ರಾಜ್ಯದಲ್ಲಿ ಕೇಸರಿ ಶಾಲು ಹಿಜಾಬ್ ವಿವಾದದ ಕಿಚ್ಚು ಹೆಚ್ಚಾಗಿದ್ದು ಹಲವು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ. ಈ ಮಧ್ಯೆ ಬಾಗಲಕೋಟೆ, ಶಿವಮೊಗ್ಗದ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದು ಪರಿಸ್ಥಿತಿ ಉದ್ವಿಗ್ನವಾಗಿದೆ.

ಈ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಶೈಕ್ಷಣಿಕ ಕೇಂದ್ರಗಳಲ್ಲಿ ಅಶಾಂತಿಗೆ ಕಾರಣವಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ  ಕುರಿತು ಮಾಧ್ಯಮ ಪ್ರಕಟಣೆ ಮಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಶೈಕ್ಷಣಿಕ ಕೇಂದ್ರಗಳಲ್ಲಿ ಅಶಾಂತಿಗೆ ಕಾರಣವಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಶಾಲಾ-ಕಾಲೇಜುಗಳು ರಾಷ್ಟ್ರದ ಭಾವೈಕತೆಯ ಕೇಂದ್ರ ಬಿಂದು. ವಿದ್ಯಾರ್ಥಿಗಳ ಸಾಮಾಜಿಕ ಸ್ವಾಸ್ಥ ಕೆಡಿಸುವ ಅಸ್ತ್ರಗಳಾಗಬಾರದು. ಪೋಷಕರು ಇದರ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.

Key words: Hijab-Controversy-home minister-Araga jnanendra