ಹಿಜಾಬ್ ವಿವಾದ: ವಿಚಾರಣೆ ಸೆ.7ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್.

ನವದೆಹಲಿ,ಸೆಪ್ಟಂಬರ್,5,2022(www.justkannada.in):  ಶಾಲೆಗಳ ತರಗತಿಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿಷೇಧ ವಿಧಿಸಿರುವ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನ ಸುಪ್ರೀಂಕೋರ್ಟ್ ಸೆಪ್ಟಂಬರ್ 7ಕ್ಕೆ ಮುಂದೂಡಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠದಲ್ಲಿ ಅರ್ಜಿಗಳ ವಿಚಾರಣೆ ನಡೆಯುತ್ತಿದೆ. ಕ್ಯಾಂಪಸ್‌ಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲು ಸರ್ಕಾರಿ ಕಾಲೇಜುಗಳ ಅಭಿವೃದ್ಧಿ ಸಮಿತಿಗಳಿಗೆ ಅಧಿಕಾರ ನೀಡಿದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಲಾಗಿದೆ.

Key words: Hijab controversy-Supreme Court -adjourned -hearing – September 7.