Saturday, September 26, 2026

BDA Apartments

ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವ ಶರ್ಮಾ ಪ್ರಮಾಣ ವಚನ ಸ್ವೀಕಾರ BDA JK_Adv BD...
Home Front Page ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವ ಶರ್ಮಾ ಪ್ರಮಾಣ ವಚನ ಸ್ವೀಕಾರ

ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವ ಶರ್ಮಾ ಪ್ರಮಾಣ ವಚನ ಸ್ವೀಕಾರ

ಗುವಾಹಟಿ,ಮೇ,12,2026 (www.justkannada.in): ಅಸ್ಸಾಂ ರಾಜ್ಯದ  ಮುಖ್ಯಮಂತ್ರಿಯಾಗಿ  ಬಿಜೆಪಿ ಹಿರಿಯ ನಾಯಕ ಹಿಮಂತ ಬಿಸ್ವ ಶರ್ಮಾ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವ ಶರ್ಮಾ ಪ್ರಮಾಣ ವಚನ ಸ್ವೀಕರಿಸಿದರು. ಅಸ್ಸಾಂ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಪ್ರಮಾಣ ವಚನ ಬೋಧಿಸಿದರು.

ಹಾಗೆಯೇ ಸಚಿವರಾಗಿ ರಾಮೇಶ್ವರ ತೇಲಿ, ಅತುಲ್ ಬೋರಾ, ಚರಣ್ ಬೋರೋ, ಅಜಂತ ನೆಯೋಗ್ ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ , ಆಂಧ್ರ ಸಿಎಂ ಚಂದ್ರನಾಯ್ಡು ಬಾಬು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.

Key words: Himanta Biswa Sarma, sworn , Assam, Chief Minister