ಇಂದು, ನಾಳೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಾಹನ ಸಂಚಾರ ನಿರ್ಬಂಧ

ಚಾಮರಾಜನಗರ, ಜುಲೈ,29,2025 (www.justkannada.in): ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಡೆಗೋಡೆ ಕುಸಿತ ಹಿನ್ನಲೆ ಇಂದು, ನಾಳೆ ವಾಹನ ಸಂಚಾರಕ್ಕೆ  ನಿರ್ಬಂಧ ವಿಧಿಸಲಾಗಿದೆ.

ಗೋಪಾಲಸ್ವಾಮಿ ಬೆಟ್ಟದ ರಸ್ತೆ ಬದಿ ಪ್ಯಾರಾಪಿಟ್ ವಾಲ್ ಕುಸಿದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಎರಡು ದಿನ ದೇವಾಲಯವನ್ನ ಬಂದ್ ಮಾಡಲಾಗಿದೆ.  ಶ್ರಾವಣ ಮಾಸದ ಪ್ರಯುಕ್ತ ಬೆಟ್ಟಕ್ಕೆ ಭೇಟಿ ಕೊಡುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು ದುರಸ್ತಿ ಕಾರ್ಯ ನಡೆಯುತ್ತಿರುವ  ಹಿನ್ನಲೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದ್ದು ಈ ಕುರಿತು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.

ಬಿಳಿಗಿರಿರಂಗನ ಬೆಟ್ಟಕ್ಕೆ ಗುಡಿಗೆ ಹೋಗುವ ಹೊಂಡರಬಾಳು ಮಾರ್ಗವೂ ಬಂದ್ ಆಗಿದ್ದು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನಲೆಯಲ್ಲಿ ಸೆಪ್ಟಂಬರ್ 27 ರವರೆಗೆ ನಿರ್ಬಂಧ ವಿಧಿಸಲಾಗಿದೆ.vtu

Key words: Vehicle restrictions, Himavad Gopalaswamy Hills