ನವದೆಹಲಿ,ಡಿಸೆಂಬರ್,23,2025 (www.justkannada.in): ಬಾಂಗ್ಲಾದೇಶದಲ್ಲಿ ನಡೆದ ದೀಪು ಚಂದ್ರದಾಸ್ ಭೀಕರ ಹತ್ಯೆ ಖಂಡಿಸಿ ನವದೆಹಲಿಯಲ್ಲಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು.
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಹಿಂದೂಪರ ಸಂಘಟನೆಗಳು ನವದೆಹಲಿಯ ಬಾಂಗ್ಲಾದೇಶದ ರಾಯಭಾರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರು ಬ್ಯಾರಿಕೇಡ್ ಕಿತ್ತೆಸೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರ ಜೊತೆ ಪ್ರತಿಭಟನಾಕಾರರಿಂದ ವಾಗ್ವಾದ ನಡೆಯಿತು.
ಬಾಂಗ್ಲಾದೇಶದ ಮೈಮೆನ್ಸಿಂಗ್ ಪ್ರದೇಶದಲ್ಲಿ ದೀಪು ಚಂದ್ರ ದಾಸ್ ಅವರ ಬರ್ಬರ ಹತ್ಯೆಯಾಗಿದ್ದು ಕುರಿತು ಕಳವಳ ವ್ಯಕ್ತಪಡಿಸಿರುವ ಭಾರತ, ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಅಪರಾಧಿಗಳನ್ನು ತಕ್ಷಣವೇ ಗುರುತಿಸಿ, ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದೆ.
Key words: Condemnation, atrocities, Hindus, Bangladesh, Protest







