ಮರಾಠಿಗರ ಸಮಗ್ರ ಅಭಿವೃದ್ಧಿಗೆ ನಿಗಮ ಸ್ಥಾಪನೆ ಸೂಕ್ತ ; ಡಿಸಿಎಂ ಸವದಿ ಸಮರ್ಥನೆ

ಬೆಂಗಳೂರು,ನವೆಂಬರ್,16,2020(www.justkannada.in) ;  ಮರಾಠಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದರಿಂದ ಸಾಮಾಜಿಕ ಸಮಾನತೆಗೆ ಅವಕಾಶವಾಗುತ್ತದೆ, ಈ ಸಮುದಾಯದಲ್ಲಿ ಅತ್ಯಂತ ಬಡವರು ಮತ್ತು ಹಿಂದುಳಿದವರಿದ್ದಾರೆ. ಅವರ ಸಮಗ್ರ ಅಭಿವೃದ್ಧಿಗೆ ಈ ನಿಗಮದ ಸ್ಥಾಪನೆ ಸೂಕ್ತ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸಮರ್ಥಿಸಿದ್ದಾರೆ.kannada-journalist-media-fourth-estate-under-loss

ಕೇವಲ ಭಾಷೆಯ ಆಧಾರದಲ್ಲಿ ಪರಿಗಣಿಸುವುದು ಸರಿಯಲ್ಲ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮರಾಠಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಕೈಗೊಂಡ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಅವರು ಮರಾಠ ಎಂದಾಕ್ಷಣ ಕೇವಲ ಭಾಷೆಯ ಆಧಾರದಲ್ಲಿ ಪರಿಗಣಿಸುವುದು ಸರಿಯಲ್ಲ. ಇದು ಸಮುದಾಯದ ಅಭಿವೃದ್ಧಿ ಹಾಗೂ ಈ ನಿಗಮವನ್ನು ಸ್ಥಾಪಿಸಬೇಕೆಂದು ಹಲವು ವರ್ಷಗಳಿಂದ ಬೇಡಿಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಅತ್ಯಂತ ಸಮರ್ಪಕವಾಗಿದೆ ಎಂದು ಡಿಸಿಎಂ ಸವದಿ ತಿಳಿಸಿದ್ದಾರೆ.

holistic-development-Marathi-Suitable-establishment-corporation-DCM-Savadi-Justification

key words ; holistic-development-Marathi-Suitable-establishment-corporation-DCM-Savadi-Justification