ಇಂದು ಮೈಸೂರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ: ನಾಳೆ ಪೊಲೀಸ್ ಅಧಿಕಾರಿಗಳ ಜತೆ ಸಭೆ.

ಮೈಸೂರು,ಆಗಸ್ಟ್,26,2021(www.justkannada.in):  ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ಮೈಸೂರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಆಗಮಿಸಲಿದ್ದು ನಾಳೆ ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಈಗಾಗಲೇ ಎಫ್ ಐಆರ್ ದಾಖಲಾಗಿದೆ. ಪೋಲಿಸರು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಈ ಪ್ರಕರಣವನ್ನ ತುಂಬಾ ಗಂಭೀರವಾಗಿ ಪರಿಗಣಿಸಲಾಗಿದ್ದು, ಇಂದು ಸಂಜೆ ಮೈಸೂರಿಗೆ ತೆರಳುತ್ತಿದ್ದೇನೆ. ನಾಳೆ ಪೋಲಿಸ್ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನು ಈಗಾಗಲೇ ವಿದ್ಯಾರ್ಥಿನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಬೇಧಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಬೆಂಗಳೂರಿನಿಂದ ಹಿರಿಯ ಅಧಿಕಾರಿ ಪ್ರತಾಪ್ ರೆಡ್ಡಿ ಅವ್ರನ್ನ ಮೈಸೂರಿಗೆ ಕಳುಹಿಸಲಾಗಿದ್ದು, ಬೇರೆ ಬೇರೆ ತಂಡಗಳನ್ನ ರಚಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ. ಬಂಧನದ ಬಗ್ಗೆ ಮಾಹಿತಿ‌ ಸಿಕ್ಕಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮೈಸೂರು ಪ್ರಮುಖವಾದ ಪ್ರವಾಸಿ ತಾಣ. ಸಾವಿರಾರು ಜನ ಪ್ರವಾಸಿಗರು ಅಲ್ಲಿಗೆ ಬರುತ್ತಾರೆ. ಈ ಘಟನೆ ದುರದೃಷ್ಟಕರ, ತಲೆತಗ್ಗಿಸುವಂತದ್ದು. ನಾಳೆ ಇಡೀ ದಿನ ಮೈಸೂರಿನಲ್ಲೇ ಇರುತ್ತೇನೆ. ಪೊಲೀಸ್ ಅಧಿಕಾರಿಗಳ ಜೊತೆ ಸಭೆಗಳನ್ನ ನಡೆಸುತ್ತೇನೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ENGLISH SUMMARY…

Home Minister Araga Jnanendra to visit Mysuru today: Meeting with Police officials tmrw
Mysuru, August 26, 2021 (www.justkannada.in): Home Minister of Karnataka Araga Jnanendra will visit Mysuru today. He will conduct a meeting with the police officials tomorrow to discuss the incident of gang rape that took place two days ago at the foothills of Chamundi.
Speaking in Bengaluru today, he informed that an FIR is registered already, and the police are searching for evidence and trap the culprits. “We have considered this case very seriously. I am visiting Mysuru today evening. I will conduct a meeting with the police officials there tomorrow,” he said.
He also informed that the victim of the gang rape is hospitalized and treated. “All efforts are made to crack the case. Senior Police officer Pratap Reddy is in Mysuru. Separate teams are formed to trace the culprits. They will be caught at any cost. However, there is no much information,” he added.
Keywords: Mysuru gang rape/ Home Minister/ Araga Jnanendra/ meeting/ police

 

Key words: Home Minister -Araga Jnanendra- today- Meeting -police officers -tomorrow.