ಮತ್ತೊಮ್ಮೆ ಲಾಕ್ ಡೌನ್ ಮಾಡಲ್ಲ: ಹಳ್ಳಿಗಳಿಗೆ ಹೋಗಿ ಸೋಂಕು ಹರಡಬೇಡಿ ಎಂದ ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು, ಜುಲೈ 05, 2020 (www.justkannada.in): ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿದ್ದು, ಆತಂಕ ಮನೆಮಾಡಿದೆ. ಸೋಂಕು ಭೀತಿ ಹಿನ್ನಲೆಯಲ್ಲಿ ಹಲವರು ಬೆಂಗಳೂರು ತೊರೆದು ತಮ್ಮ ತಮ್ಮಊರುಗಳತ್ತ ಮುಖ ಮಾಡುತ್ತಿದ್ದಾರೆ.

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡುವುದಿಲ್ಲ. ಹೀಗಾಗಿ ಲಾಕ್ ಡೌನ್ ಬಗ್ಗೆ ಭಯ ಬೇಡ. ಯಾರೂ ಸಹ ಬೆಂಗಳೂರು ತೊರೆದು ಹಳ್ಳಿಗಳಿಗೆ ತೆರಳಬೇಡಿ ಎಂದು ಸಚಿವರು ಮನವಿ ಮಾಡಿದ್ದಾರೆ.