ತುಮಕೂರು,ಸೆಪ್ಟಂಬರ್,9,2025 (www.justkannada.in): ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಗಳಿರಲಿ, ಮುಸ್ಲಿಂರಿರಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಡಾ.ಜಿ.ಪರಮೇಶ್ವರ್, ಮದ್ದೂರಿಗೆ ಬಿಜೆಪಿಯವರು ಹೋಗಲಿ ಯಾರು ಬೇಡ ಅಂತ ಹೇಳುತ್ತಾರೆ. ಈ ಸಂದರ್ಭದಲ್ಲಿ ಪ್ರಚೋದನೆ ಮಾಡುವುದು ಸರಿಯಲ್ಲ. ಎಲ್ಲರೂ ಸಹಕಾರ ಮತ್ತು ಶಾಂತಿ ಕಾಪಾಡಬೇಕು ಎಂದರು.
ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಿದವರನ್ನು ಯಾವುದೇ ಕಾರಣಕ್ಕೂ ನಾವು ರಕ್ಷಣೆ ಮಾಡಲ್ಲ. ಇಂದು ಜಿಲ್ಲಾ ಉಸ್ತುವಾರಿ ಸಚಿವರು ಶಾಂತಿ ಸಭೆ ಮಾಡುತ್ತಿದ್ದಾರೆ. ಹಿಂದೂಗಳಿರಲಿ ಮುಸ್ಲಿಮರು ಇರಲಿ, ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.
Key words: Stone pelting, case, Home Minister, Dr. G. Parameshwar