ಬೆಂಗಳೂರು,ಆಗಸ್ಟ್,18,2025 (www.justkannada.in): ಎಫ್ ಎಸ್ ಎಲ್ ವರದಿ ಬರುವವರೆಗೂ ಧರ್ಮಸ್ಥಳದಲ್ಲಿ ಶವ ಶೋಧ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.
ಧರ್ಮಸ್ಥಳ ಪ್ರಕರಣ ಕುರಿತು ಇಂದು ವಿಧಾನಸಭೆಯಲ್ಲಿ ಮಾತನಾಡಿ ಉತ್ತರ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಧರ್ಮಸ್ಥಳ ಪ್ರಕರಣದ ಬಗ್ಗೆ ಇಂದು ಇಡೀ ದೇಶ ಗಮನಿಸುತ್ತಿದೆ. ಧರ್ಮಸ್ಥಳ ಠಾಣೆಗೆ ಹೋಗಿ ಓರ್ವ ದೂರು ಕೊಟ್ಟಿದ್ದನು. ನಿರಂತರ ಜೀವ ಬೆದರಿಕೆವೊಡ್ಡಿ ಶವ ಹೂತಿದ್ದ ಬಗ್ಗೆ ದೂರು ನೀಡಲಾಗಿತ್ತು. ಈ ಬಗ್ಗೆ ತನಿಖೆ ನಡೆಸುವಂತೆ ಧರ್ಮಸ್ಥಳ ಪೊಲೀಶ್ ಠಾಣೆಗೆ ಅಪರಿಚಿತ ದೂರು ನೀಡಿದ್ದನು. ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಸಹ ಕೇಳಿದ್ದನು. ಈ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ 164ರಡಿ ಹೇಳಿಕೆ ದಾಖಲಿಸಿದ್ದರು. ಇದಾದ ಬಳಿಕ ನ್ಯಾಯಾಧೀಶರು ತನಿಖೆಗೆ ಸೂಚನೆ ನೀಡಿದ್ದರು.
ಬಳಿಕ ಪ್ರಕರಣ ಕುರಿತು ಎಸ್ ಐಟಿ ರಚನೆ ಮಾಡಲಾಗಿತ್ತು. ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿತ್ತು. ಅಪರಿಚಿತನಿಂದ ಹೇಳಿಕೆ ಪಡೆದ ಬಳಿಕ ಮ್ಯಾಪಿಂಗ್ ಮಾಡಲಾಗಿತ್ತು. ಉತ್ಖನನ ನಡೆಸಿದ ಪೈಕಿ ಎರಡು ಜಾಗದಲ್ಲಿ ಅಸ್ಥಿಪಂಜರ, ಮೂಳೆ, ಬುರುಡೆ ಪತ್ತೆಯಾಗಿದೆ. ಒಂದು ಜಾಗದಲ್ಲಿ ಅಸ್ಥಿಪಂಜರ ಸಿಕ್ಕಿದೆ, ಎಲ್ಲವನ್ನೂ ಎಫ್‌ಎಸ್‌ಎಲ್ ಗೆ ಕಳುಹಿಸಲಾಗಿದೆ. ಮತ್ತೊಂದು ಜಾಗದಲ್ಲಿ ಮೂಳೆ, ಬುರುಡೆ ಪತ್ತೆಯಾಗಿದ್ದವು. ಮೂಳೆ ಹಾಗೂ ಬುರುಡೆಗಳನ್ನು ಎಫ್‌ಎಸ್‌ಎಲ್ ಗೆ ಕಳುಹಿಸಲಾಗಿದೆ. ಇನ್ನೂ ತನಿಖೆ ಆರಂಭವಾಗಿಲ್ಲ ಎಂದು ಪರಮೇಶ್ವರ್ ತಿಳಿಸಿದರು
ಅಪರಿಚಿತ ಧರ್ಮಸ್ಥಳದ ಎಲ್ಲಾ ಕಡೆ ತೋರಿಸಿದರೇ ಅಗೆಯುವುದಿಲ್ಲ. ಉತ್ಖನನ ಸ್ಥಗಿತಗೊಳಿಸುವ ಬಗ್ಗೆ ಎಸ್ ಐಟಿಯವರೇ ನಿರ್ಧರಿಸಿದ್ದಾರೆ. ಎಫ್‌ಎಸ್‌ಎಲ್ ವರದಿ ಬರುವವರೆಗೆ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಧರ್ಮಸ್ಥಳ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ಹೀಗಾಗಿ ಬಹಳ ಎಚ್ಚರಿಕೆಯಿಂದ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.
Key words: Dharmasthala case, Home Minister, G Parameshwar, Session