ಗೃಹ ಸಚಿವರು ದಕ್ಷತೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ: ರಾಜೀನಾಮೆ ಪ್ರಶ್ನೆಯೇ ಇಲ್ಲ- ಸಿಎಂ ಬೊಮ್ಮಾಯಿ ತಿರುಗೇಟು.

ಬೆಂಗಳೂರು,ಜುಲೈ,5,2022(www.justkannada.in): 545 ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಬಂಧನ ಬೆನ್ನಲ್ಲೆ ಗೃಹ ಸಚಿವ ಅರಗ ಜ್ಞಾನೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿದ ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ  ಹೆಚ್.ಡಿ ಕುಮಾರಸ್ವಾಮಿಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಮ್ಮ ಗೃಹ ಸಚಿವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ.  ಗೃಹ ಸಚಿವರು ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರು ಸ್ಟ್ರಾಂಗ್ ಆಗಿದ್ದರಿಂದಲೇ ಅಕ್ರಮ ಪ್ರಕರಣ ಹೊರಬಂತು. ಪ್ರಕರಣ ಹೊರಬಂದ ಕೂಡಲೇ ಸಿಐಡಿ ತನಿಖೆಗೆ ವಹಿಸಿದ್ದೇವೆ. ಗೃಹಸಚಿವರ ದಕ್ಷತೆಯಿಂದಲೇ ತನಿಖೆ ಈ ಹಂತಕ್ಕೆ ಬಂದಿದೆ ಎಂದು ಹೇಳಿದರು.border-districts-state-covid-negative-test-outside-states-minister-basavaraja-bommai

ಕರಾವಳಿ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ನಿನ್ನೆ ರಾತ್ರಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಮಳೆಯಿಂದ ಹಾನಿಯಾದವರಿಗೆ ಪರಿಹಾರ ನೀಡಲು ಸೂಚಿಸಿದ್ದೇನೆ ಎಂದರು.

Key words: Home Minister –no question – resignation-CM Bommai