ಬೆಂಗಳೂರು,ಜುಲೈ,28,2025 (www.justkannada.in): ನಟಿ ರಮ್ಯಾಗೆ ನಟ ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈ ಬಗ್ಗೆ ರಮ್ಯಾ ದೂರು ನೀಡಿದರೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್, ರಮ್ಯಾ ಅವರು ದೂರು ನೀಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ. ಅಲ್ಲದೆ, ಸುಮೊಟೋ ಪ್ರಕರಣ ದಾಖಲಿಸಲು ಅವಕಾಶವಿದ್ದರೆ ಪೊಲೀಸರು ಪರಿಶೀಲನೆ ನಡೆಸುತ್ತಾರೆ ಎಂದು ಹೇಳಿದ್ದಾರೆ.
ನಟ ರಮ್ಯಾ ಅವರಿಗೆ ನಟ ದರ್ಶನ್ ಅಭಿಮಾನಿಗಳು ಇನ್ ಸ್ಟಾಗ್ರಾಂನಲ್ಲಿ ಕೆಟ್ಟದಾಗಿ ಮೆಸೇಜ್ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ನಟಿ ರಮ್ಯಾ ಅವರು ಎಲ್ಲ ಡಿ ಬಾಸ್ (ದರ್ಶನ್) ಅಭಿಮಾನಿಗಳೇ ನನ್ನ ಇನ್ ಸ್ಟಾಗ್ರಾಂ ಖಾತೆಗೆ ಸ್ವಾಗತ. ರೇಣುಕಾಸ್ವಾಮಿ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಎನ್ನುವುದಕ್ಕೆ ನಿಮ್ಮ ಕಾಮೆಂಟ್ ಗಳೇ ಸಾಕ್ಷಿ ಎಂದು ಇನ್ ಸ್ಟಾಗ್ರಾಂನಲ್ಲಿ ಸ್ಟೋರಿ ಪೋಸ್ಟ್ ಮಾಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡಿದ ಸ್ಕ್ರೀನ್ ಶಾಟ್ಗಳನ್ನು ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ರಮ್ಯಾ ಅವರು ಶೇರ್ ಮಾಡಿಕೊಂಡರು.
Key words: Darshan, fans, bad comments, Ramya, Home Minister, Parameshwar