ಮಹೇಶ್ ತಿಮರೋಡಿ ಬಂಧಿಸಿ ಕಾನೂನು ಕ್ರಮಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆ

ಬೆಂಗಳೂರು,ಆಗಸ್ಟ್,18,2025 (www.justkannada.in):  ಸಿಎಂ ಸಿದ್ದರಾಮಯ್ಯ ಕೊಲೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ಬಂಧಿಸಿ ಕಾನೂನು ಕ್ರಮಕೈಗೊಳ್ಳಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿಎಂ ವಿರುದ್ದ ಮಹೇಶ್ ತಿಮರೋಡಿ ಹೇಳಿಕೆ ನೀಡಿದ್ದ ವಿಚಾರ ವಿಧಾನಸಭೆಯಲ್ಲೂ ಭಾರೀ ಚರ್ಚೆಯಾಗಿದ್ದು ಕೂಡಲೇ ಕ್ರಮ ಕೈಗೊಳ್ಳುವಂತೆ ವಿಪಕ್ಷ ನಾಯಕ ಆರ್.ಅಶೋಕ್ ಸದನದಲ್ಲಿ ಆಗ್ರಹಿಸಿದ್ದರು.

ಈ ಹಿನ್ನಲೆಯಲ್ಲಿ ಇದೀಗ ಮಹೇಶ್ ತಿಮರೋಡಿ ವಿರುದ್ಧ ಕಾನೂನು ಕ್ರಮಕ್ಕೆ ಪೊಲೀಸರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಸೂಚಿಸಿದ್ದಾರೆ.  ಇಂದು ಸಂಜೆಯೊಳಗೆ ಮಹೇಶ್ ತಿಮರೋಡಿ ಬಂಧಿಸುವ ಸಾಧ್ಯತೆ ಇದೆ.

Key words: Legal Action, against, Mahesh Timarodi,  Home Minister, Parameshwar