ಅಹಿತಕರ ಘಟನೆ ನಡೆಯದಂತೆ ಕ್ರಮ: ಸಂಭ್ರಮಕ್ಕೆ ಅಡ್ಡಿ ಮಾಡದಂತೆ ಸೂಚನೆ- ಗೃಹ ಸಚಿವ ಪರಮೇಶ್ವರ್

ಹುಬ್ಬಳ್ಳಿ,ಡಿಸೆಂಬರ್,31,2025 (www.justkannada.in): ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಇಂದು ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ಹೊಸ ವರ್ಷ ಸಂಭ್ರಮಾಚರಣೆ ವೇಳೆ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಯುವಕರು ಇರುವ ಕಡೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.  ಸಂಭ್ರಮಕ್ಕೆ ಯಾವುದೇ ಅಡ್ಡಿ ಮಾಡದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.

ಮದ್ಯ ಸೇವಿಸಿ ವಾಹನ ಚಲಾಯಿಸಿ ಅಪಘಾತ ಮಾಡುವ ಪ್ರಕರಣ ಹೆಚ್ಚುತ್ತಿವೆ. ತಮ್ಮ ಜೀವದ ಜೊತೆಗೆ ಬೇರೆಯವರ ಜೀವಕ್ಕೂ ಕುತ್ತು ತರುತ್ತಾರೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.

Key words: New year, celebrations, Home Minister, Parameshwar