ಬೆಂಗಳೂರು,ಜನವರಿ,9,2026 (www.justkannada.in): ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿಯನ್ನು ಬಂಧಿಸಿ ಕರೆದೊಯ್ಯುವ ವೇಳೆ ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಸಿಐಡಿ ತನಿಖೆಗೆ ನೀಡುವ ಬಗ್ಗೆ ಚರ್ಚಿಸುತ್ತೇನೆ ಎಂದಿದ್ದಾರೆ.
ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹುಬ್ಬಳ್ಳಿ ಪ್ರಕರಣ ಬಗ್ಗೆ ಕೆಲವು ಮಾಹಿತಿ ಪಡೆದುಕೊಂಡಿದ್ದೇನೆ. ಈ ಪ್ರಕರಣವನ್ನು ಸಿಐಡಿಗೆ ಕೊಡಲು ಚರ್ಚೆ ಮಾಡುತ್ತೇವೆ. ಸಿಎಂ ಜೊತೆ ಚರ್ಚಿಸಿ ಸಿಐಡಿಗೆ ಪ್ರಕರಣ ವಹಿಸುತ್ತೇವೆ ಸಿಐಡಿ ತನಿಖೆ ನಡೆದರೆ ಸತ್ಯಾಸತ್ಯತೆ ಗೊತ್ತಾಗುತ್ತೆ ಯಾರ ತಪ್ಪಿದೆ ಅಂತಾ ತನಿಖೆಯಲ್ಲಿ ಗೊತ್ತಗುತ್ತೆ. ಬಿಜೆಪಿಯವರು ಒಂದು ಹೇಳ್ತಾರೆ ನಮ್ಮವರು ಒಂದು ಹೇಳ್ತಾರೆ ಎಲ್ಲವೂ ತನಿಖೆಯಿಂದ ಗೊತ್ತಾಗಲಿದೆ ಎಂದರು.
ಬಿಜೆಪಿ ನಾಯಕರು ಪೊಲೀಸರನ್ನು ಅಮಾನತುಗೊಳಿಸುವಂತೆ ಹೇಳುತ್ತಿದ್ದಾರೆ. ಆದರೆ ಪ್ರಕರಣದಲ್ಲಿ ಸುಜಾತಾ ಹಂಡಿ ಅವರದ್ದೇ ತಪ್ಪಿದೆ ಎನ್ನಲಾಗುತ್ತಿದೆ. ಹಾಗಾಗಿ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ನಿಟ್ಟಿನಲ್ಲಿ ಚರ್ಚಿಸಿ ನಿರ್ಧರಿಸುತ್ತೇವೆ ಎಂದರು.
Key words: Hubballi case, CID, Discussion, Home Minister, Parameshwar







