ಹುಬ್ಬಳ್ಳಿ ಲವ್ ಜಿಹಾದ್ ಆರೋಪ ಪ್ರಕರಣ  : ಆರೋಪಿ ವಿರುದ್ದ ಕ್ರಮಕ್ಕೆ ಸೂಚನೆ : ಗೃಹ ಸಚಿವ ಪರಮೇಶ್ವರ್

ದಾವಣಗೆರೆ,ಏಪ್ರಿಲ್,4,2026 (www.justkannada.in):  ಹುಬ್ಬಳ್ಳಿಯಲ್ಲಿ  ಜಿಮ್‌ ಟ್ರೈನರ್​ ವಿರುದ್ದ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆರೋಪಿ ವಿರುದ್ದ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈಗಾಗಲೇ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಜಿಮ್​ ಟ್ರೈನರ್​ ಮೇಲೆ‌ ಕ್ರಮ‌ ತೆಗೆದುಕೊಳ್ಳಲು ಹೇಳಿದ್ದೇನೆ. ಯಾರೇ ಆಗಿದ್ದರೂ ಕೂಡ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದರು.

ಪ್ರಕರಣದ ಬಗ್ಗೆ ಎಲ್ಲ ಮಾಹಿತಿಯನ್ನು ನೀಡಲು ಅಧಿಕಾರಿಗಳಿಗೆ  ಸೂಚಿಸಿದ್ದೇಣೆ. ಯಾರೇ ಆಗಿದ್ದರೂ ಕೂಡ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ. ಇಂತಹ ಕೇಸ್​ಗಳಲ್ಲಿ ಕಠಿಣ ಕ್ರಮ ಇರುತ್ತದೆ ಎಂದು ಪರಮೇಶ್ವರ್ ತಿಳಿಸಿದರು.

Key words: Hubballi, love jihad, allegation case, Home Minister,  Parameshwar