500 ರೂ. ಬೆಟ್ಟಿಂಗ್ ಕಟ್ಟಿರುವುದಾಗಿ ಹೇಳಿಕೆ ಕೇಸ್ : ಹೈಕೋರ್ಟ್ ಮೆಟ್ಟಿಲೇರಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,23,2026 (www.justkannada.in):  ಕಬಡ್ಡಿ ಆಟದಲ್ಲಿ 500 ರೂ. ಬೆಟ್ಟಿಂಗ್ ಕಟ್ಟಿದ್ದಾಗಿ ಹೇಳಿಕೆ ನೀಡಿದ್ದಕ್ಕೆ ತಮ್ಮ ವಿರುದ್ದ ದಾಖಲಾಗಿರುವ ಪ್ರಕರಣವನ್ನು ರದ್ದುಕೋರಿ  ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

500 ರೂಪಾಯಿ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಿ.ಪರಮೇಶ್ವರ್ 42ನೇ ಎಸಿಜೆಎಂ ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ತುಮಕೂರಿನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯದಲ್ಲಿ ಅತಿಥಿಯಾಗಿ ಭಾಗವಹಿಸಿ ಅನಧಿಕೃತ ಬೆಟ್ಟಿಂಗ್‌ ಕಟ್ಟಿ; ಸಣ್ಣ ಸಂಘಟಿತ ಅಪರಾಧ ಕೃತ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಗೃಹಸಚಿವ ಜಿ.ಪರಮೇಶ್ವರ ವಿರುದ್ಧ ಅಪರಾಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ 42ನೇ ಎಸಿಜೆಎಂ ಕೋರ್ಟ್ ಆದೇಶ ಹೊರಡಿಸಿತ್ತು.

ಇದೀಗ ಈ ಆದೇಶ ರದ್ದು ಮಾಡುವಂತೆ ಕೋರಿ ಗೃಹ ಸಚಿವ ಪರಮೇಶ್ವರ್ ಹೈಕೋರ್ಟ್ ಮೊರೆ ಹೋಗಿದ್ದಾರೆ.  500 ರೂ. ಬೆಟ್ಟಿಂಗ್ ಕಟ್ಟಿದ್ದಾಗಿ ಪರಮೇಶ್ವರ್ ಹೇಳಿಕೆ ಸಂಬಂಧ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಹಂದ್ರಾಳು ಗ್ರಾಮದ ಎಚ್‌.ಆರ್‌.ನಾಗಭೂಷಣ್‌  ಅವರು ಖಾಸಗಿ ದೂರು ಸಲ್ಲಿಸಿದ್ದರು.

Key words: Home Minister, Parameshwar, High Court, betting Case