ಸುರ್ಜೇವಾಲ ಕಲೆಕ್ಷನ್ ಗೆ ಬಂದಿದ್ದಾರೆ ಎಂದ ಬಿಜೆಪಿಗೆ ಗೃಹ ಸಚಿವ ಡಾಜಿ.ಪರಮೇಶ್ವರ್ ತಿರುಗೇಟು.

ಬೆಂಗಳೂರು,ನವೆಂಬರ್,2,2023(www.justkannada.in): ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕಲೆಕ್ಷನ್ ಗೆ ರಾಜ್ಯಕ್ಕೆ ಬಂದಿದ್ದಾರೆ ಎಂದು ಟೀಕಿಸಿದ್ದ ಬಿಜೆಪಿಗೆ ಗೃಹಸಚಿವ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ್,  ಬಿಜೆಪಿ ಅಧಿಕಾರದಲ್ಲಿದ್ದಾಗ ಕಾರ್ಯದರ್ಶಿಗಳು ಅದನ್ನೇ ಮಾಡಿದ್ರಾ  ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ಪದೇ ಪದೇ ರಾಜ್ಯಕ್ಕೆ ಬರುತ್ತಿದ್ದರು ಅವರೂ ಸಹ ಕಲೆಕ್ಷನ್ ಮಾಡುತ್ತಿದ್ರು ಅಂತಾ ಹೇಳಬೇಕಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.

ಪಕ್ಷ ಸರ್ಕಾರದ ಬಗ್ಗೆ ಮಾತನಾಡದಂತೆ ಹೈಕಮಾಂಡ್ ಎಚ್ಚರಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಾ.ಜಿ.ಪರಮೇಶ್ವರ್, ಸರ್ಕಾರದ ಪರ ಶಾಸಕರು ಮಾತನಾಡಬಹುದು ಸರ್ಕಾರದ ವಿರುದ್ದ ಗೊಂದಲದ ಹೇಳಿಕೆ ನೀಡಬಾರದು ಎಂದಿದ್ದಾರೆ  ಶಾಸಕರಿಗೆ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಮಾಧ್ಯಮಗಳಲ್ಲಿ ನೋಡಿದ್ದೇನೆ. ಸುರ್ಜೇವಾಲಾ ಅವರು ನನ್ನನ್ನ ಕರೆದು ಮಾತನಾಡಿಲ್ಲ. ಅಧ್ಯಕ್ಷರು ಸಿಎಂರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಾವುದರ ಬಗ್ಗೆ ನಾಯಕರು ಚರ್ಚಿಸಿದ್ದಾರೋ ಗೊತ್ತಿಲ್ಲ ಎಂದರು.

ಬಿಜೆಪಿ ನಾಯಕರ ತಂಡದಿಂದ ಬರ ಅಧ್ಯಯನ ಪ್ರವಾಸ ವಿಚಾರ ಕುರಿತು ಟೀಕಿಸಿದ ಸಚಿವ ಡಾ.ಪರಮೇಶ್ವರ್, ಬರ ಶುರುವಾಗಿ 3 ತಿಂಗಳಾಗಿದೆ.  ಮಳೆ ನಿಂತು 3 ತಿಂಗಳಾಗಿದೆ. ಇಷ್ಟುದಿನ ಬಿಜೆಪಿಯವರು ಏನು ಮಾಡುತ್ತಿದ್ದರು. ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಎಂದು ಘೋಷಿಸಿದ್ದೇವೆ. 17 ಸಾವಿರ ಕೋಟಿ ಬರ ಪರಿಹಾರಕ್ಕೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಈವರೆಗೂ ಕೇಂದ್ರ ಸರ್ಕಾರ 1 ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ. ಬಿಜೆಪಿ ನಾಯಕರು ಕೇಂದ್ರದ ಬಳಿ ಮಾತನಾಡಿ ಅನುದಾನ ಕೊಡಿಸಲಿ. ರಾಜ್ಯದ ಹಿತದೃಷ್ಟಿಯಿಂದ ಕೇಂದ್ರ ವಿಶೇಷ ಅನುದಾನ ಕೊಡಬೇಕು ಎಂದು ಆಗ್ರಹಿಸಿದರು.

Key words: Home Minister- Parameshwar – BJP -saying – Surjewala – collection.