ಗೃಹಸಚಿವರ ನಿವಾಸಕ್ಕೆ ಮುತ್ತಿಗೆ ಯತ್ನ ಪ್ರಕರಣ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಎಫ್ ಐಆರ್.

ಬೆಂಗಳೂರು,ಜುಲೈ ,28,2023(www.justkannada.in): ಉಡುಪಿ ಕಾಲೇಜು ಶೌಚಾಲಯದಲ್ಲಿ ಮೊಬೈಲ್ ವಿಡಿಯೋ ಚಿತ್ರೀಕರಣ ಘಟನೆ ಖಂಡಿಸಿ ಸೂಕ್ತಕ್ರಮಕ್ಕೆ ಆಗ್ರಹಿಸಿ ನಿನ್ನೆ ಗೃಹ ಸಚಿವ ಡಾ ಜಿ. ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಎಫ್​ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

10 ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್ 143, 149ರ ಅಡಿಯಲ್ಲಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ ​ಐಆರ್ ದಾಖಲಾಗಿದೆ.  ಉಡುಪಿ ಕಾಲೇಜು ಶೌಚಾಲಯದಲ್ಲಿ ಮೊಬೈಲ್ ವಿಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ ತಪ್ಪಿತಸ್ಥರನ್ನ ಬಂಧಿಸಿವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚ ನಿನ್ನೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಸದಾಶಿವನಗರದ ನಿವಾಸದ ಮುಂದೆ ಪ್ರತಿಭಟನೆ ಮಾಡಿದ್ದರು.

ಈ ವೇಳೆ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದ್ದರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದರು.  ಇದೀಗ 10 ಕಾರ್ಯಕರ್ತರ ವಿರುದ್ಧ ಎಫ್​ಐಆರ್ ದಾಖಲಾಗಿದೆ ಎನ್ನಲಾಗುತ್ತಿದೆ.

Key words: Home Minister- residence-protest- FIR -against -BJP -Yuva Morcha -workers.