ಧಾರಾಕಾರ ಮಳೆಯಿಂದಾಗಿ ಮನೆ ಗೋಡೆ ಕುಸಿದು ವೃದ್ಧೆ ಸಾವು….

ಚಿತ್ರದುರ್ಗ,ಅ,23,2019(www.justkannada.in): ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಅವಾಂತರ ಸೃಷ್ಠಿಸಿದ್ದು ಈ ನಡುವೆ ಮಳೆಯಿಂದಾಗಿ ಮನೆ ಗೋಡೆ ಕುಸಿದು ವೃದ್ದೆ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರದಲ್ಲಿ ಈ ಘಟನೆ ನಡೆದಿದೆ. ವೃದ್ಧೆ  ಬುಡನ್ ಬಿ(80) ಮೃತಪಟ್ಟವರು. ಚಿತ್ರದುರ್ಗ ಜಿಲ್ಲೆಯಾದ್ಯಾಂತ ಭಾರಿ ಮಳೆಯಾಗುತ್ತಿದೆ.  ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗೋಡೆ ಕುಸಿದು ಮೃದ್ದೆ ಮೃತಪಟ್ಟಿದ್ದಾರೆ.

ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Key words: Home wall -collapses – rains-chitradurga