Monday, September 21, 2026

BDA Apartments

ಹಾಸನ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು BDA JK_Adv BDA Adv
Home Crime ಹಾಸನ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು

ಹಾಸನ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು

ಹಾಸನ, ಫೆಬ್ರವರಿ 26, 2023 (www.justkannada.in): ಹಾಸನ ಜಿಲ್ಲೆಯಲ್ಲಿಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

ರಸ್ತೆ ಬಳಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಕಾರೇಹಳ್ಳಿ‌ ಬಳಿ ದುರಂತ ಸಂಭವಿಸಿದೆ.

ಪತಿ- ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲೋಕೇಶ್‌ ಚಾರಿ, ಲಕ್ಷ್ಮಿ ಹಾಗೂ ಇಬ್ಬರು ಮಕ್ಕಳು ‌ಮೃತರು.

ತಡರಾತ್ರಿ ನುಗ್ಗೇಹಳ್ಳಿ- ತಿಪಟೂರು ರಸ್ತೆಯಲ್ಲಿ ಘಟನೆ ನಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣ ‌ನಜ್ಜುಗುಜ್ಜಾಗಿದೆ.  ಸ್ಥಳಕ್ಕೆ ನುಗ್ಗೇಹಳ್ಳಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಹೊಸೂರಿನಿಂದ‌ ಪತ್ನಿಯನ್ನು ಕರೆದುಕೊಂಡು ನವಿಲೆ ಗ್ರಾಮಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಕಾರೇಹಳ್ಳಿ ಬಳಿ ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ.