Friday, October 16, 2026

Dasara Wishes

Happy Dasara
Home Crime ಭೀಕರ ಅಪಘಾತ: ಲಾರಿ ಪಲ್ಟಿಯಾಗಿ  10 ಮಂದಿ ಸಾವು

ಭೀಕರ ಅಪಘಾತ: ಲಾರಿ ಪಲ್ಟಿಯಾಗಿ  10 ಮಂದಿ ಸಾವು

ಉತ್ತರ ಕನ್ನಡ, ಜನವರಿ 22,2025 (www.justkannada.in): ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ 10 ಮಂದಿ ಸಾವನ್ನಪ್ಪಿರುವ ಘಟನೆಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ  ಇಂದು ಬೆಳಗ್ಗೆ ಈ ಘಟನೆ  ಸಂಭವಿಸಿದೆ. ಫಯಾಜ್ ಜಮಖಂಡಿ (45), ವಾಸೀಂ ಮುಡಗೇರಿ (35), ಇಜಾಜ್ ಮುಲ್ಲಾ (20), ಸಾದೀಕ್ ಭಾಷ್ (30), ಗುಲಾಮ್ ಹುಷೇನ್ ಜವಳಿ  (40 ), ಇಮ್ತಿಯಾಜ್ ಮುಳಕೇರಿ( 36)  ಅಲ್ಪಾಜ್ ಜಾಫರ್ ಮಂಡಕ್ಕಿ( 25),  ಜೀಲಾನಿ ಅಬ್ದುಲ್ ಜಖಾತಿ (25) ಅಸ್ಲಂ ಬಾಬುಲಿ ಬೆಣ್ಣಿ (24) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರು ಹಾವೇರಿ ಜಿಲ್ಲೆ ಸವಣೂರು ಮೂಲದವರೆಂಬ ಮಾಹಿತಿ ದೊರೆತಿದೆ

ಘಟನೆಯಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.​  ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ತರಕಾರಿ ತುಂಬಿದ್ದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು. ನಸುಕಿನ‌ ಜಾವ ರಸ್ತೆಯಲ್ಲಿ ಮಂಜು ಮುಸುಕಿದ್ದರಿಂದ ಲಾರಿ ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ಎಸ್​ಪಿ ನಾರಾಯಣ್​​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಎಸ್ ಪಿ ನಾರಾಯಣ್,  ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣಕ್ಕೀಡಾಗಿದ್ದಾರೆ.  ಬೆಳಿಗ್ಗೆ 4 ಗಂಟೆ ಸುಮಾರಿಗೆ ನಡೆದಿದೆ.  ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಲಾರಿ ಪಲ್ಟಿಯಾಗಿದೆ.  ದಟ್ಟ ಮಂಜು ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದಿದ್ದಾರೆ.

Key words: Horrific accident,  10 people, death, lorry overturns