ತೋಟಗಾರಿಕೆ ಇಲಾಖೆಯಿಂದ ವಿವಿಧ ಬೆಳೆಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ, ಮೇ 21,2025 (www.justkannada.in): 2025-26 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ಸಮಗ್ರ ತೋಟಗಾರಿಕೆ ಅಧಿವೃದ್ದಿ ಯೋಜನೆಯಡಿ ಜಿಲ್ಲೆಯ ನಾಲ್ಕು ತಾಲ್ಲೂಕಿನಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲು ಇಲಾಖೆ ವತಿಯಿಂದ ರೈತರಿಗೆ ಪ್ರೋತ್ಸಾಹಧನ ನೀಡಲಾಗುತ್ತಿದ್ದು ಇದಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಈ ಕಾರ್ಯಕ್ರಮದಡಿ ರೈತರು ದ್ರಾಕ್ಷಿ, ಬಾಳೆ, ಮಾವು,ಪರಂಗಿ ಹಣ್ಣು, ದಾಳಿಂಬೆ, ಸೀಬೆ, ಡ್ರಾಗನ್ ಪ್ರೊಟ್,ಬೆಣ್ಣೆ ಹಣ್ಣು, ಹಣಬೆ, ಹೈಬ್ರಿಡ್ ತರಕಾರಿ ಹಾಗೂ ಹೂವಿನ ಬೆಳೆಗಳನ್ನು ಬೆಳೆಯಬಹುದು.ಇ ದಕ್ಕೆ ಬೇಕಾದ ರೋಗ ಮತ್ತು ಕೀಟ ನಿಯಂತ್ರಣ, ಪ್ಲಾಸ್ಟಿಕ್ ಹೊದಿಕೆ, ಪ್ರಾಥಮಿಕ ಸಂಸ್ಕರಣ ಘಟಕಗಳು, ಹಸಿರು ಮನೆ, ಕೃಷಿಹೊಂಡ,ಜೇನುಸಾಕಾಣಿಕೆ , ಮೊಬೈಲ್ ವೆಂಡಿಂಗ್ ಕಾರ್ಟ್, ಸೋಲಾರ್ ಪವರ್ ಕೋಲ್ಡ್ ರೂಂ, ಜೀಜೋತ್ಪದಕ ಘಟಕಗಳನ್ನು ನಿರ್ಮಿಸಿಕೊಳ್ಳಲು  ರೈತರು ತೋಟಗಾರಿಕೆ ಇಲಾಖೆಯಿಂದ  ಸಹಾಯಧನವನ್ನು ಪಡೆಯಬಹುದಾಗಿದೆ.

ಅರ್ಜಿಯನ್ನು ಮೇ 31ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೇವನಹಳ್ಳಿ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಮಲ್ಲಿಕಾರ್ಜುನ್ ಬಾಬು – 9448825101, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ನಿರ್ದೇಶಕರು ಶಶಿಕಲಾ ಟಿ.ಆರ್ – 9482129648, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ನಿರ್ದೇಶಕರು ಎಂ.ಎಸ್ ದೀಪಾ – 9880210892, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ನಿರ್ದೇಶಕರು ಹರೀಶ್ – 9880461607, ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.

Key words: apply,  incentives, various crops , Horticulture Department