Wednesday, August 5, 2026

BDA Apartments

Home Front Page ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ…

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ…

ತುಮಕೂರು,ನ,19,2019(www.justkannada.in):  ರಾಜ್ಯದಲ್ಲಿ ಉಪಚುನಾವಣಾ ಕಣ ರಂಗೇರಿದ್ದು ಮೂರು ಪಕ್ಷಗಳ ಪ್ರಚಾರ ಕಾರ್ಯ ಜೋರಾಗಿದೆ. ಈ ನಡುವೆ ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ವಿರುದ್ದ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶರತ್ ಬಚ್ಚೇಗೌಡ ಮಠಗಳಿಗೆ ಭೇಟಿ ನೀಡುತ್ತಿದ್ದಾರೆ.

ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಶರತ್ ಬಚ್ಚೇಗೌಡ ಭೇಟಿ ನೀಡಿದ್ದಾರೆ. ಸಿದ್ಧಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ್ ಸ್ವಾಮೀಜಿ ಅವರ ಗದ್ದುಗೆಗೆ ಶರತ್ ಬಚ್ಚೇಗೌಡ ವಿಶೇಷ ಪೂಜೆ ಸಲ್ಲಿಸಿದ್ದಾರೆ.  ನಂತರ ಸಿದ್ಧಗಂಗಾ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಮೊನ್ನೆಯಷ್ಟೇ ಆದಿಚುಂಚನಗಿರಿ ಮಠಕ್ಕೆ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಭೇಟಿ ನೀಡಿದ್ದರು. ಇದೀಗ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ.

Key words: hoskote-independent candidate -Sharat Bachegowda- visit-Tumkur – Siddagangamath