ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಹೊಸಪೇಟೆ ಬಂದ್ : ಹಿಂದೂಪರ ಕಾರ್ಯಕರ್ತರಿಂದ ಪ್ರತಿಭಟನೆ.

ವಿಜಯನಗರ,ಜುಲೈ,2,2022(www.justkannada.in):  ರಾಜಸ್ತಾನದ ಉದಯಪುರದಲ್ಲಿ ಹಿಂದೂ ಟೈಲರ್  ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ದೇಶಾದ್ಯಂತ ಹಿಂದೂಪರ ಸಂಘಟನೆಗಳ ಪ್ರತಿಭಟನೆ ಹೆಚ್ಚಾಗಿದ್ದು ಈ ಮಧ್ಯೆ ಕರ್ನಾಟಕದಲ್ಲೂ ಪ್ರತಿಭಟನೆಯ ಕಿಚ್ಚು ಜೋರಾಗಿದೆ.

ಕನ್ಹಯ್ಯಲಾಲ್ ಹತ್ಯೆ ಖಂಡಿಸಿ, ಹತ್ಯೆ ಹಂತಕರಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಆಗ್ರಹಿಸಿ ನಿನ್ನೆ  ಚಿಕ್ಕಮಗಳೂರಿನ ಮೂಡಿಗೆರೆ ಪಟ್ಟಣ ಬಂದ್ ಮಾಡಲಾಗಿತ್ತು. ಇಂದು ವಿಜಯನಗರ ಜಿಲ್ಲೆ ಹೊಸಪೇಟೆ ಬಂದ್ ಗೆ ಹಿಂದೂಪರ ಸಂಘಟನೆಗಳು ಕರೆ ನೀಡಿವೆ. ಪಾದಗಟ್ಟಿ ಆಂಜನೇಯ ದೇವಸ್ಥಾನದ ಮುಂದೆ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದಾರೆ.

ಇನ್ನು ಪ್ರತಿಭಟನಾಕಾರರನ್ನ ತಡೆಯಲು ಪೊಲೀಸರು ಮುಂದಾಗಿದ್ದು ವೇದಿಕೆ ಬಳಿ ಇದ್ದ ಕುರ್ಚಿಗಳನ್ನ ತೆರವುಗೊಳಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ.  ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಮೈಸೂರಿನಲ್ಲೂ ಹಿಂದೂಪರ ಸಂಘಟನೆಗಳಿಂದ ರ್ಯಾಲಿ ನಡೆಯುತ್ತಿದೆ.

Key words: Hospet Bandh – condemn – murder- Kanhayalal-Protest