ಆಸ್ಪತ್ರೆಯಲ್ಲಿ ಬೆಂಕಿ ಅವಘಡ, 4 ಮಂದಿ ಕೊರೊನಾ ಸೋಂಕಿತರು ಸಾವು

ಬೆಂಗಳೂರು,ಏಪ್ರಿಲ್,18,2021(www.justkananda.in) ಛತ್ತೀಸಗಢದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.jk

ಶನಿವಾರ ರಾತ್ರಿ ರಾಜಧಾನಿ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ರಾಯಪುರ ಜಿಲ್ಲಾಧಿಕಾರಿ ಭಾರತಿ ದಾಸನ್‌ ಆದೇಶಿಸಿದ್ದು, ನಗರದ ಎಲ್ಲಾ ಕೋವಿಡ್‌ ಚಿಕಿತ್ಸಾ ಕೇಂದ್ರಗಳಲ್ಲಿ ಸುರಕ್ಷತಾ ವ್ಯವಸ್ಥೆಗಳ ತಪಾಸಣೆ ನಡೆಸುವಂತೆಯೂ ಅವರು ಸೂಚಿಸಿದ್ದಾರೆ.

Hospital fire-4 Corona-Infected-Deathಒಬ್ಬರು ಸುಟ್ಟ ಗಾಯಗಳಿಂದ ಮೃತಪಟ್ಟರೆ, ಮೂವರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದು, ಆಸ್ಪತ್ರೆಯ ಮಾಲೀಕರ ವಿರುದ್ಧ ನಿರ್ಲಕ್ಷ್ಯದ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

key words : Hospital fire-4 Corona-Infected-Death