Monday, September 21, 2026

BDA Apartments

ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ಆರು ಮಂದಿ ಸಾವು… BDA JK_Adv BDA Adv
Home Crime ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ಆರು ಮಂದಿ ಸಾವು…

ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ಆರು ಮಂದಿ ಸಾವು…

ಬೀದರ್,ಜೂ,26,2019(www.justkannada.in):  ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ಆರುಮಂದಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನಲ್ಲಿ ನಡೆದಿದೆ.

ಬಸವಕಲ್ಯಾಣ ತಾಲ್ಲೂಕಿನ ಚಿಲ್ಲಾಗಲ್ಲಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ತಂದೆ ತಾಯಿ ಮಕ್ಕಳು ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ. ನದೀಮ್ ಶೇಖ್(45), ಫರೀದಾ ಬೇಗಂ(34),  ಮೆಹತಾಬಿ, ಆಯಿಷ್ ಬಾನು, ಫೈಜಾನ್ ಆಲಿ, ಫರ್ಹಾನ್ ಆಲಿ(4) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಕಳೆದ ಎರಡು ದಿನಗಳ ಹಿಂದೆ ಮಳೆ ಬಂದ ಹಿನ್ನೆಲೆ ಇಂದು ಬೆಳಿಗ್ಗೆ ನಸುಕಿನ ಜಾವ ಎಲ್ಲರೂ ಮಲಗಿದ್ದ ವೇಳೆ ಮನೆಯ ಮೇಲ್ಚಾವಣಿ ಏಕಾಏಕಿ ಕುಸಿದು ಬಿದ್ದು ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಬಸವ ಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  house-collapses death – six members -same family- bidar