Tuesday, September 22, 2026

BDA Apartments

ಬಜೆಟ್ ಮಂಡಿಸಲು ಸಿಎಂ ಸಿದ್ದರಾಮಯ್ಯ ತೆಗೆದುಕೊಂಡ ಸಮಯ ಎಷ್ಟು ಗೊತ್ತೆ..? BDA JK_Adv BD...
Home Front Page ಬಜೆಟ್ ಮಂಡಿಸಲು ಸಿಎಂ ಸಿದ್ದರಾಮಯ್ಯ ತೆಗೆದುಕೊಂಡ ಸಮಯ ಎಷ್ಟು ಗೊತ್ತೆ..?

ಬಜೆಟ್ ಮಂಡಿಸಲು ಸಿಎಂ ಸಿದ್ದರಾಮಯ್ಯ ತೆಗೆದುಕೊಂಡ ಸಮಯ ಎಷ್ಟು ಗೊತ್ತೆ..?

ಬೆಂಗಳೂರು, ಫೆಬ್ರವರಿ,16,2024(www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್ ಇಂದು ಮಂಡನೆಯಾಗಿದ್ದು ಎಲ್ಲಾ ಕ್ಷೇತ್ರಗಳಿಗೂ ಸಿಎಂ ಸಿದ್ದರಾಮಯ್ಯ ಆದ್ಯತೆ ನೀಡಿದ್ದಾರೆ.

ಇಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಒಟ್ಟು 3 ಗಂಟೆ 14 ನಿಮಿಷಗಳ ಕಾಲ ಬಜೆಟ್ ಮಂಡನೆ ಮಾಡಿದರು. ಕಳೆದ ಬಾರಿ ಸಿದ್ದರಾಮಯ್ಯ ಅವರು ಮಂಡಿಸಿದ್ದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ಇತ್ತು. ಈ ಬಾರಿ 3,71,383 ಕೋಟಿ ಗಾತ್ರದ ಬಜೆಟ್ ಮಂಡನೆಯಾಗಿದೆ.  ಈ ಮೂಲಕ ಹೊಸ ಯೋಜನೆಗಳ ಘೋಷಣೆಗಳೊಂದಿಗೆ ಕಳೆದ ಬಾರಿಗಿಂತ 44 ಸಾವಿರ ಕೋಟಿ ರೂ. ಅಧಿಕ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ.ಬಜೆಟ್ ಮಂಡಿಸಲು ಸಿಎಂ ಸಿದ್ದರಾಮಯ್ಯ ತೆಗೆದುಕೊಂಡ ಸಮಯ ಎಷ್ಟು ಗೊತ್ತೆ..? siddaramaiah-...

ಸುದೀರ್ಘ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವರು ಹಾಗೂ ಕಾಂಗ್ರೆಸ್ ಶಾಸಕರು ಅಭಿನಂದನೆ ಸಲ್ಲಿಸಿದರು.  ಬಜೆಟ್ ಭಾಷಣ ಮುಕ್ತಾಯ ಹಿನ್ನೆಲೆ ಸ್ಪೀಕರ್ ಯುಟಿ ಖಾದರ್ ಅವರು ವಿಧಾನಸಭೆ ಕಲಾಪವನ್ನು ಸೋಮವಾರ ಬೆಳಗ್ಗೆ 10.15ಕ್ಕೆ ಮುಂದೂಡಿದರು.

Key words: how much time -CM Siddaramaiah -took – present -budget