85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎಚ್.ಎಸ್ ವೆಂಕಟೇಶಮೂರ್ತಿ ಆಯ್ಕೆ

ಬೆಂಗಳೂರು, ಡಿ.4,2019(www.justkannada.in):  ಕಲಬುರ್ಗಿಯಲ್ಲಿ  ನಡೆಯುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎಚ್.ಎಸ್.ವೆಂಕಟೇಶಮೂರ್ತಿ ಅವರನ್ನ ಆಯ್ಕೆ ಮಾಡಲಾಗಿದೆ.

ಇಂದು ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎಚ್.ಎಸ್.ವೆಂಕಟೇಶಮೂರ್ತಿ ಅವರನ್ನ ಆಯ್ಕೆ  ಮಾಡಿ ನಿರ್ಧಾರ ಕೈಗೊಳ್ಳಲಾಗಿದೆ. ಕಲಬುರ್ಗಿಯ ಗುಲಬರ್ಗಾ ವಿ.ವಿ. ಆವರಣದಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2020ರ ಫೆಬ್ರುವರಿ 5, 6 ಹಾಗೂ 7ರಂದು ನಡೆಯಲಿದೆ.

ಎಚ್.ಎಸ್ ವೆಂಕಟೇಶಮೂರ್ತಿ  ಅವರು ಎಚ್​ಎಸ್​ವಿ ಎಂದೇ ಖ್ಯಾತರಾಗಿದ್ದಾರೆ. ಇವರ ಹುಟ್ಟೂರು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊದಿಗ್ಗೆರೆ.  ವೆಂಕಟಮೂರ್ತಿ ಅವರು ಕವಿತೆ, ನಾಟಕ, ಕಾದಂಬರಿ, ಮಕ್ಕಳ ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದ್ದಾರೆ.

Key words: HS Venkateshamurthi- elected- President -85th All India Kannada Literary Conference