HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ: ಡೆಡ್ ಲೈನ್ ನೀಡಿದ ಸಾರಿಗೆ ಇಲಾಖೆ.

ಬೆಂಗಳೂರು ಸೆಪ್ಟಂಬರ್,16,2023(www.justkannada.in): ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್‌ (HSRP) ಅಳವಡಿಕೆ ಕಡ್ಡಾಯವಾಗಿದೆ. ಈ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ಡೆಡ್ ಲೈನ್ ನೀಡಿದೆ.

ಹಳೆಯ ವಾಹನಗಳಿಗೆ ಪ್ಲೇಟ್ ಅಳವಡಿಕೆ  ನವೆಂಬರ್ 17 ಕೊನೆಯ ದಿನವಾಗಿದೆ. ಏಪ್ರಿಲ್​ 2019 ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ.

ಇನ್ನು ಹೆಚ್​ಎಸ್​ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದವರಿಗೆ ಸಾರಿಗೆ ಇಲಾಖೆ  ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

Key words: HSRP- number plate – mandatory-Department -Transport – dead line.