Sunday, August 23, 2026

BDA Apartments

Home Front Page ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಿಸಲು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಗೆ ಮನವಿ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಿಸಲು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಗೆ ಮನವಿ

ಬೆಂಗಳೂರು, ಡಿಸೆಂಬರ್,06,2024 (www.justkannada.in): ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಪತ್ಯೇಕಿಸಿ 2 ಮಹಾನಗರ ಪಾಲಿಕೆಗಳನ್ನಾಗಿ ಮಾಡುವ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ್ ಸಮ್ಮುಖದಲ್ಲಿ ಸಭೆ ಜರುಗಿತು.

ಧಾರವಾಡ ಕ್ಷೇತ್ರದ ಶಾಸಕ ವಿನಯ್‌ ಕುಲಕರ್ಣಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರ ನಿಯೋಗದೊಂದಿಗೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಇದಕ್ಕೆ ಸ್ಪಂದಿಸಿದ ಸಚಿವ ಭೈರತಿ ಸುರೇಶ್,  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಪ್ರತ್ಯೇಕಿಸುವ ಸಂಬಂಧ ಮುಂದಿನ ಸಚಿವ ಸಂಪುಟಕ್ಕೆ ಕಡತವನ್ನು ಮಂಡಿಸಲು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರಿಗೆ ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿ ಮತ್ತು ಧಾರವಾಡವನ್ನು ಪ್ರತ್ಯೇಕ ಮಹಾನಗರ ಪಾಲಿಕೆಗಳನ್ನಾಗಿ ಮಾಡಲು ಸಮ್ಮತಿಸಿದ್ದು, ಈಗಾಗಲೇ ಸಂಬಂಧಪಟ್ಟವರಿಗೆ ಮೌಖಿಕವಾಗಿ ಸೂಚನೆಯನ್ನು ನೀಡಿದ್ದಾರೆ ಎಂದು ಬೈರತಿ ಸುರೇಶ್ ಅವರು ತಮ್ಮನ್ನು ಭೇಟಿ ಮಾಡಿದ ನಿಯೋಗಕ್ಕೆ ತಿಳಿಸಿದರು.

ತಮ್ಮ ಮನವಿಗೆ ಸೂಕ್ತ ರೀತಿಯಲ್ಲಿ ಕೂಡಲೇ ಸ್ಪಂದಿಸಿದ ಸಚಿವರ ಕಾರ್ಯವೈಖರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರುಗಳು ಅಭಿನಂದನೆಗಳನ್ನು ಸಲ್ಲಿಸಿದರು.

Key words: separate, Hubballi-Dharwad city Corporation, Request