ಅವರು ನಮ್ಮ ಪಕ್ಷಕ್ಕೆ ಬಂದಿದ್ದರಿಂದ ನಾವು ಅಧಿಕಾರಕ್ಕೆ ಬಂದಿಲ್ಲ: ಅನರ್ಹ ಶಾಸಕರಿಗೆ ಸಚಿವ ಸ್ಥಾನ ಕುರಿತು ನಳೀನ್ ಕುಮಾರ್ ಕಟೀಲ್ ಹೇಳಿದ್ದೇನು ಗೊತ್ತೆ..?

ಹುಬ್ಬಳ್ಳಿ,ಡಿ,8,2019(www.justkannada.in): ಅನರ್ಹ ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದರಿಂದ  ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿಲ್ಲ. ಅವರು ರಾಜೀನಾಮೆ ನೀಡಿದ್ದಕ್ಕೆ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್,  ಕಾಂಗ್ರೆಸ್ – ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದರಿಂದ ನಾವು ಅಧಿಕಾರಕ್ಕೆ  ನಮ್ಮ ಪಕ್ಷ ಆಡಳಿತಕ್ಕೆ ಬಂದಿದೆ ವಿನಃ ಅವರು ನಮ್ಮ ಪಕ್ಷಕ್ಕೆ ಬಂದಿರುವುದಕ್ಕೆ ಅಲ್ಲ. ಅನರ್ಹರು ಬಿಜೆಪಿಗೆ ಬಂದ ಕಾರಣಕ್ಕೆ ಅವರಿಗೆ ಟಿಕೆಟ್ ನೀಡಲಾಗಿದೆ. ಅವರಿಗೆ ಟಿಕೆಟ್ ನೀಡಿ ಒಂದು ಹಂತದ ನ್ಯಾಯ ಕೊಟ್ಟಿದ್ದೇವೆ. ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ನಲ್ಲಿ ಹಲವು ಶಾಸಕರು ಬೇಸರದಲ್ಲಿದ್ದಾರೆ , ಅಲ್ಲಿಯ ಶಾಸಕರು  ಬಿಜೆಪಿಗೆ ಬರೋದಾದರೇ ಈ ಬಗ್ಗೆ ಚರ್ಚೆ ಮಾಡುತ್ತೇವೆ. ನಮ್ಮದು ರಾಜಕೀಯ ಪಕ್ಷ ಯಾರೇ ಬಂದರ ಕರೆದುಕೊಳ್ಳುತ್ತೇವೆ. ಉಪಚುನಾವಣೆಯಲ್ಲಿ 15 ಕ್ಕೆ 15 ಸ್ಥಾನ ಬಿಜೆಪಿ ಗೆಲ್ಲುತ್ತದೆ. ಬಿಜೆಪಿ ಯಾರನ್ನೂ ಆಪರೇಷನ್ ಕಮಲ ಮಾಡುವುದಿಲ್ಲ  ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದರು.

Key words: hubbli-bjp-state president-nalin kumar katil-disqualified MLA