ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪ್ರತಿಭಟನೆ ಬಿಸಿ…

ಹುಬ್ಬಳ್ಳಿ,ಅ,5,2019(www.justkannada.in): ಕೇಂದ್ರ ಸರ್ಕಾರ ರಾಜ್ಯಕ್ಕೆ ಕಡಿಮೆ ಪ್ರಮಾಣದ ನೆರೆ ಪರಿಹಾರ ಬಿಡುಗಡೆ ಮಾಡಿದ್ದನ್ನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಕೇಂದ್ರ ಸರ್ಕಾರ ಕಡಿಮೆ ಪ್ರಮಾಣದ ನೆರೆಪರಿಹಾರವನ್ನ ಬಿಡುಗಡೆ ಮಾಡಿದೆ ಎಂದು ಕಿಡಿಕಾರಿದರು.

ಪ್ರತಿಭಟನೆ ನಡೆಸುತ್ತಿದ್ದ 100ಕ್ಕೂ ಹೆಚ್ಚು ಕೈ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಕಳೆದ ಎರಡು ತಿಂಗಳಿನಿಂದ ಪ್ರವಾಹದಿಂದ  ನೆರೆ ಸಂತ್ರಸ್ತರು ನೆಲೆ ಕಳೆದುಕೊಂಡು ಸಂಕಷ್ಟದಲ್ಲಿದ್ದರೂ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಲಿರಲಿಲ್ಲ. ಹೀಗಾಗಿ ರಾಜ್ಯದ ಎಲ್ಲೆಡೆ ಪರಿಹಾರಕ್ಕಾಗಿ ಒತ್ತಡ ಜೋರಾಗಿತ್ತು. ಸ್ವಪಕ್ಷದ ನಾಯಕರೇ ಕೇಂದ್ರದ ವಿರುದ್ದ ತಿರುಗಿ ಬಿದ್ದಿದ್ದರು. ಹೀಗಾಗಿ ಒತ್ತಾಯಕ್ಕೆ ಮಣಿದ ಕೇಂದ್ರ ಸರ್ಕಾರ ನಿನ್ನೆ 1,200 ಕೋಟಿ ರೂ ನೆರೆ ಪರಿಹಾರ ಬಿಡುಗಡೆ ಮಾಡಿದೆ.

Key words: Hubli -protests-against-Union minister -Nirmala Sitharaman